
ಬೆಂಗಳೂರು: ಸ್ವಿಮ್ಮಿಂಗ್ ಪೂಲ್‌ನಲ್ಲಿ ಅನುಮಾನಾಸ್ಪದ ರೀತಿಯಲ್ಲಿ ಮಹಿಳೆಯೊಬ್ಬರ ಶವ ಪತ್ತೆಯಾಗಿರುವ ಘಟನೆ ಕನಕಪುರ ತಾಲೂಕಿನ ಬೆಟ್ಟೆಗೌಡನಪಾಳ್ಯದಲ್ಲಿ ನಡೆದಿದೆ.

ಬೆಟ್ಟೆಗೌಡನಪಾಳ್ಯ ನಿವಾಸಿ ಪ್ರತಿಭಾ (29) ಮೃತ ಮಹಿಳೆ.
ಪ್ರತಿಮಾ ಹಾಗೂ ಪತಿ ಬಾಬು ಗ್ರಾಮದ ಹೊರವಲಯದಲ್ಲಿರೋ ತೋಟದ ಮನೆಯಲ್ಲಿ ವಾಸವಾಗಿದ್ದರು. ಪ್ರತಿಮಾ ಬಾಬುಗೆ ಎರಡನೇ ಪತ್ನಿಯಾಗಿದ್ದು, ಇಬ್ಬರು ಮಕ್ಕಳಿದ್ದಾರೆ. ಕೌಟುಂಬಿಕ ಕಲಹದಿಂದ ಗಲಾಟೆಯಾಗಿ ಪತಿ ಬಾಬು ಕೊಲೆ ಮಾಡಿದ್ದಾನೆ ಎಂದು ಪ್ರತಿಭಾ ಕುಟುಂಬಸ್ಥರು ಆರೋಪಿಸಿದ್ದಾರೆ.

ಘಟನಾ ಸ್ಥಳಕ್ಕೆ ಕೋಡಿಹಳ್ಳಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪತಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.
ಮೃತದೇಹ ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದು, ಪ್ರತಿಮಾ ಕುಟುಂಬಸ್ಥರ ದೂರಿನ ಮೇಲೆ ಪ್ರಕರಣ ದಾಖಲಾಗಿದೆ.