
ಹಾಸನ : ಶ್ರವಣಬೆಳಗೊಳ ಹಾಗೂ ಅರಸೀಕೆರೆಯಲ್ಲಿ ಹಮ್ಮಿಕೊಂಡಿದ್ದ ಹಿಂದೂ ಸಮಾಜೋತ್ಸವದಲ್ಲಿ ಭಾಷಣಕಾರರಾಗಿ ಭಾಗವಹಿಸಬೇಕಿದ್ದ ವಿಶ್ವ ಹಿಂದೂ ಪರಿಷತ್ ಸಹ ಕಾರ್ಯದರ್ಶಿ ಶರಣ್ ಪಂಪ್‌ವೆಲ್ ಗೆ ಹಾಸನ ಜಿಲ್ಲಾ ಪ್ರವೇಶ ನಿಷೇಧಿಸಿ ಜಿಲ್ಲಾಧಿಕಾರಿ ಕೆ.ಎಸ್.ಲತಾಕುಮಾರಿ ಆದೇಶಿಸಿದ್ದಾರೆ.

ಪ್ರಚೋದನಕಾರಿ ಭಾಷಣ ಮಾಡಿರುವ ಸಂಬಂಧ ವಿವಿಧ ಜಿಲ್ಲೆಗಳಲ್ಲಿ ಶರಣ್ ಪಂಪ್‌ವೆಲ್ ವಿರುದ್ಧ ಪ್ರಕರಣ ದಾಖಲಾಗಿದ್ದು, ಜಿಲ್ಲೆಯಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡುವ ಉದ್ದೇಶದಿಂದ ಶರಣ್ ಪಂಪ್‌ವೆಲ್ ಹಾಸನ ಜಿಲ್ಲೆಯ ಕಾರ್ಯಕ್ರಮಗಳಲ್ಲಿ ಭಾಗವಹಿಸುವಂತಿಲ್ಲ ಎಂದು ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.
