ಕಾರು- ಲಾರಿ ಡಿಕ್ಕಿ: ಸ್ಥಳದಲ್ಲೇ ಮೂವರು ಸಾ*ವು; ಓರ್ವ ಗಂಭೀರ

ತುಮಕೂರು: ಕಾರು ಮತ್ತು ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತಕ್ಕೆ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ತುಮಕೂರು ತಾಲೂಕಿನ ನೆಲಹಾಳ್ ಬಳಿಯ ರಾಷ್ಟ್ರೀಯ ಹೆದ್ದಾರಿ 48 ರಲ್ಲಿ ಇಂದು(ಜ.26) ನಡೆದಿದೆ.

ಬೆಂಗಳೂರಿನ ಖಾಸಗಿ ಕಂಪನಿಗಳಲ್ಲಿ ಕೆಲಸ ಮಾಡುತ್ತಿದ್ದ ಉತ್ತರ ಪ್ರದೇಶ ಮೂಲದ ಅನಿಕೇತ್ (42), ಅಭೀರ್ (44) ಹಾಗೂ ಆಂಧ್ರಪ್ರದೇಶ ಮೂಲದ ಸನ್ಮೋಕ್ತಿ (35) ಮೃತ ದುರ್ದೈವಿಗಳು.

ಅಪಘಾತದ ರಭಸಕ್ಕೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದ್ದು, ಮೂವರು ಸಾವನ್ನಪ್ಪಿದ್ದಾರೆ. ಓರ್ವನ ಸ್ಥಿತಿ ಗಂಭೀರವಾಗಿದ್ದು, ಇಬ್ಬರಿಗೆ ಸಣ್ಣಪುಟ್ಟ ಗಾಯಗಳಾಗಿವೆ.

ಸ್ನೇಹಿತರ ಈ ತಂಡ ಗೋಕರ್ಣ, ಮುರುಡೇಶ್ವರ ಹಾಗೂ ಉಡುಪಿಗೆ ಪ್ರವಾಸಕ್ಕೆ ತೆರಳಿತ್ತು. ಪ್ರವಾಸ ಮುಗಿಸಿ ಇಂದು ಮುಂಜಾನೆ ಬೆಂಗಳೂರಿಗೆ ವಾಪಸಾಗುತ್ತಿದ್ದಾಗ ಈ ಅವಘಡ ಸಂಭವಿಸಿದ್ದು, ಚಾಲಕನ ನಿಯಂತ್ರಣ ತಪ್ಪಿ ಕಾರು ಮುಂದೆ ಚಲಿಸುತ್ತಿದ್ದ ಲಾರಿಗೆ ವೇಗವಾಗಿ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ.

ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ತುಮಕೂರು ಜಿಲ್ಲಾಸ್ಪತ್ರೆಯ  ರವಾನಿಸಲಾಗಿದೆ.

ಘಟನಾ ಸ್ಥಳಕ್ಕೆ ತುಮಕೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (SP) ಅಶೋಕ್ ಕೆ.ವಿ. ಹಾಗೂ ಕೋರಾ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

error: Content is protected !!