ಮೂಡುಬಿದಿರೆ: ಕಾರ್ಕಳ ಕಡೆಯಿಂದ ಹೊಸ್ಮಾರು ಕಡೆಗೆ ತೆರಳುತ್ತಿದ್ದ ಗೂಡ್ಸ್ ಟೆಂಪೋ ಮತ್ತು ಹೊಸ್ಮಾರು ಕಡೆಯಿಂದ ಕಾರ್ಕಳದತ್ತ ಬರುತ್ತಿದ್ದ ಕಾರು ಮುಖಾಮುಖಿ ಡಿಕ್ಕಿ ಹೊಡೆದ ಘಟನೆ ನೆಲ್ಲಿಕಾರು-ಕಾರ್ಕಳ ಮುಖ್ಯ ರಸ್ತೆಯಲ್ಲಿ ಸೋಮವಾರ(ಜ.26) ಬೆಳಿಗ್ಗೆ ಸಂಭವಿಸಿದ್ದು, ಅಪಘಾತದಲ್ಲಿ ಮಗು ಸೇರಿದಂತೆ ಹಲವರು ಗಾಯಗೊಂಡಿದ್ದಾರೆ.

ಡಿಕ್ಕಿಯ ತೀವ್ರತೆಗೆ ಕಾರು ಸಂಪೂರ್ಣವಾಗಿ ನಜ್ಜುಗುಜ್ಜಾಗಿದ್ದು, ಕಾರು ಚಾಲಕನಿಗೆ ಗಂಭೀರ ಗಾಯಗಳಾಗಿವೆ.

ಅಪಘಾತಕ್ಕೊಳಗಾದ ಗೂಡ್ಸ್ ಟೆಂಪೋದಲ್ಲಿ ಕಾರ್ಕಳ ಕಡೆಯಿಂದ ಮನೆ ಖಾಲಿ ಸಾಮಗ್ರಿಗಳನ್ನು ಸ್ಥಳಾಂತರಿಸಲು ತೆರಳುತ್ತಿದ್ದ ಒಂದು ಕುಟುಂಬ ಪ್ರಯಾಣಿಸುತ್ತಿತ್ತು. ಟೆಂಪೋದಲ್ಲಿದ್ದ ಮಗು ಸೇರಿದಂತೆ ಹಲವರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ತಕ್ಷಣ ಸಮೀಪದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ.

ಘಟನಾ ಸ್ಥಳಕ್ಕೆ ಮೂಡುಬಿದಿರೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಅಪಘಾತದ ಕುರಿತು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.