ಚೇಳೈರಿನಲ್ಲಿ ಗುರುಮೂರ್ತಿ ಪ್ರತಿಷ್ಠಾಪನಾ ದಿನಾಚರಣೆ; ವಿಶಿಷ್ಟ ಸಾಧಕರಿಗೆ ಅಭಿನಂದನಾ ಕಾರ್ಯಕ್ರಮ

ಮಂಗಳೂರು: ಚೇಳೈರು ಬ್ರಹ್ಮಶ್ರೀ ನಾರಾಯಣ ಗುರು ಸಮಾಜ ಸೇವಾ ಸಂಘದ ಗುರುಮೂರ್ತಿ ಪ್ರತಿಷ್ಠಾಪನಾ ದಿನಾಚರಣೆ ಮತ್ತು ಭಜನಾ ಮಂಗಲೋತ್ಸವ ಪ್ರಯುಕ್ತ ಚೇಳೈರು ಸಮುದಾಯಭವನದಲ್ಲಿ ಧಾರ್ಮಿಕ ಸಭಾ ಕಾರ್ಯಕ್ರಮ ಹಾಗೂ ವಿಶಿಷ್ಟ ಸಾಧನೆಗೈದವರಿಗೆ ಅಭಿನಂದನಾ ಕಾರ್ಯಕ್ರಮ ನಡೆಯಿತು.

ವೇದಿಕೆಯಲ್ಲಿ ಚೇಳೈರು ಗ್ರಾಮ ಪಂಚಾಯತ್ ಅಧ್ಯಕ್ಷ ಜಯಾನಂದ, ಪಡುಪಣಂಬೂರು ಗ್ರಾಮ ಪಂಚಾಯತ್ ಅಧ್ಯಕ್ಷೆ ಕುಸುಮಾ ಚಂದ್ರಶೇಖರ್, ಪ್ರತಾಪ್ ಶೆಟ್ಟಿ ಪೊರ್ಡೆ ಚೇಳೈರು, ವಿಶ್ವನಾಥ ಸನಿಲ್ ಚೇಳೈರು ಕಾಲನಿ, ಉದ್ಯಮಿ ಹರೀಶ್ ಮುಂಚೂರು,ಚೇಳೈರು ಗ್ರಾಮ ಪಂಚಾಯತ್ ಉಪಾಧ್ಯಕ್ಷೆ ರೇಖಾ,ಮಹಿಳಾ ಘಟಕದ ಅಧ್ಯಕ್ಷೆ ಮಾಲತಿ ರೇವೆಂದ್ರ,ನಾರಾಯಣ ಗುರು ಸಂಘದ ಕೋಶಾಧಿಕಾರಿ ಗುರುವಪ್ಪ,ಸಂಘಟನಾ ಕಾರ್ಯದರ್ಶಿ ಗಂಗಾಧರ ಪೂಜಾರಿ ಬಾಳ ಚೇಳೈರು ಕಾಲನಿ,ಕಟ್ಟಡ ಸಮಿತಿ ಕಾರ್ಯಾಧ್ಯಕ್ಷ ಶ್ರೀಕಾಂತ್ ಪೂಜಾರಿ,ಮುಂತಾದವರು ಉಪಸ್ಥಿತರಿದ್ದರು.

ಇದೇ ಸಂದರ್ಭದಲ್ಲಿ ರಾಷ್ಟ ಮಟ್ಟದಲ್ಲಿ ಕ್ರೀಡೆಯಲ್ಲಿ ವಿಶೇಷ ಸಾಧನೆಗೈದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು ಹಾಗೂ ಹಿಂದುಳಿದ ವಿದ್ಯಾರ್ಥಿಗಳಿಗೆ ಗೀತಾ ಶ್ರೀನಿವಾಸ್ ಅಮೀನ್ ವತಿಯಿಂದ ವಿದ್ಯಾರ್ಥಿ ವೇತನ ನೀಡಲಾಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ನಾರಾಯಣ ಗುರು ಸಮಾಜ‌ ಸೇವಾ ಸಂಘದ ಅಧ್ಯಕ್ಷ ಶ್ರೀನಿವಾಸ್ ಅಮೀನ್ ವಹಿಸಿದ್ದರು. ಕಟ್ಟಡ ಸಮಿತಿ ಅಧ್ಯಕ್ಷ ರಮೇಶ್ ಪೂಜಾರಿ ಚೇಳೈರು ಸ್ವಾಗತಿಸಿ, ಕಾರ್ಯದರ್ಶಿ ರಾಘವ ಸನೀಲ್ ಧನ್ಯವಾದ ಸಮರ್ಪಿಸಿ, ಪ್ರಭಾವತಿ ಚೇಳೈರು ಕಾರ್ಯಕ್ರಮ ನಿರೂಪಿಸಿದರು.

error: Content is protected !!