ಕಾಶ್ಮೀರದಲ್ಲಿ ಭಾರಿ ಹಿಮಪಾತ: 58 ವಿಮಾನಗಳ ಹಾರಾಟ ರದ್ದು

ಸಾಂದರ್ಭಿಕ ಚಿತ್ರ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಅಬ್ಬರಿಸುತ್ತಿರುವ ಭಾರಿ ಹಿಮಪಾತದಿಂದಾಗಿ ಶ್ರೀನಗರದ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಇಂದು(ಜ. 27) ವಿಮಾನ ಸಂಚಾರ ಸಂಪೂರ್ಣವಾಗಿ ಅಸ್ತವ್ಯಸ್ತಗೊಂಡಿದ್ದು, ಪ್ರತಿಕೂಲ ಹವಾಮಾನ ಹಾಗೂ ರನ್‌ವೇ ಮೇಲೆ ದಟ್ಟವಾಗಿ ಮಂಜು ಕವಿದಿರುವ ಕಾರಣ ಇಡೀ ದಿನದ ವಿಮಾನ ಕಾರ್ಯಾಚರಣೆಯನ್ನು ಸ್ಥಗಿತಗೊಳಿಸಲಾಗಿದೆ.

ಈ ಹಿನ್ನೆಲೆಯಲ್ಲಿ ವಿಮಾನ ನಿಲ್ದಾಣಕ್ಕೆ ಬರಬೇಕಿದ್ದ 29 ಹಾಗೂ ಇಲ್ಲಿಂದ ಹೊರಡಬೇಕಿದ್ದ 29 ಸೇರಿದಂತೆ ಒಟ್ಟು 58 ವಿಮಾನಗಳ ಹಾರಾಟವನ್ನು ರದ್ದುಗೊಳಿಸಲಾಗಿದೆ. ಪ್ರಯಾಣಿಕರ ಸುರಕ್ಷತೆಯ ದೃಷ್ಟಿಯಿಂದ ಈ ನಿರ್ಧಾರ ತೆಗೆದುಕೊಳ್ಳಲಾಗಿದ್ದು, ರನ್‌ವೇ ಸಂಪೂರ್ಣ ಸುರಕ್ಷಿತವಾಗಿದೆ ಎಂದು ಖಚಿತಪಡಿಸಿಕೊಂಡ ನಂತರವೇ ಸೇವೆ ಪುನರಾರಂಭಿಸಲಾಗುವುದು ಎಂದು ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರದ ಅಧಿಕಾರಿಗಳು ತಿಳಿಸಿದ್ದಾರೆ.

ಕಾಶ್ಮೀರ ಕಣಿವೆಯಲ್ಲಿ ಇನ್ನೂ ಕೆಲ ಗಂಟೆಗಳ ಕಾಲ ಹಿಮಪಾತ ಮುಂದುವರಿಯುವ ಸಾಧ್ಯತೆ ಇದೆ.ವಿಮಾನ ಸಂಚಾರದ ಬದಲಾವಣೆಗಳ ಬಗ್ಗೆ ಮಾಹಿತಿಗಾಗಿ ಆಯಾ ವಿಮಾನಯಾನ ಸಂಸ್ಥೆಗಳ ಸಂಪರ್ಕದಲ್ಲಿರಲು ಪ್ರಯಾಣಿಕರಿಗೆ ಕೋರಲಾಗಿದೆ.

error: Content is protected !!