ಪುತ್ತೂರು: ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಬೆಟ್ಟಂಪಾಡಿ, ಇರ್ದೆ, ರೆಂಜ ಹಾಗೂ ಅರ್ಲಪದವು ಪ್ರದೇಶಗಳಲ್ಲಿ ಅಕ್ರಮವಾಗಿ ಮಾದಕ ವಸ್ತುವಾದ ಎಂಡಿಎಂಎ ಸೇವನೆ ಹಾಗೂ ಮಾರಾಟ ಮಾಡುತ್ತಿದ್ದ ಜಾಲವೊಂದನ್ನು ಪುತ್ತೂರು ಗ್ರಾಮಾಂತರ ಪೊಲೀಸರು ಪತ್ತೆಹಚ್ಚಿದ್ದಾರೆ.

ಈ ಸಂಬಂಧ ಪುತ್ತೂರು ನಿವಾಸಿಗಳಾದ ಮೊಹಮ್ಮದ್ ಹರ್ಷದ್ (33), ಮಹಮ್ಮದ್ ಆರೀಶ್ (31), ಇಬ್ರಾಹಿಂ ಅಶ್ರಫ್ ಅಲಿಯಾಸ್ ರೋಜಾ ಅಶ್ರಫ್ (46) ಮತ್ತು ಆರೋಪಿಗಳಿಗೆ ಎಂಡಿಎಂಎ ಪೂರೈಕೆ ಮಾಡುತ್ತಿದ್ದ ಬಂಟ್ವಾಳ ನಿವಾಸಿ ಮುಸ್ತಾಫ (46) ಎಂಬವರನ್ನು ಬಂಧಿಸಲಾಗಿದೆ.

ಆರೋಪಿಗಳಿಂದ ಅಂದಾಜು ರೂ.50,000 ಮೌಲ್ಯದ ಸುಮಾರು 6.39 ಗ್ರಾಂ ಎಂಡಿಎಂಎ, 0.87 ಗ್ರಾಂ ಗಾಂಜಾ, ಮೊಬೈಲ್ ಫೋನ್‌ಗಳು ಹಾಗೂ ಕೃತ್ಯಕ್ಕೆ ಬಳಸಿದ ಅಂದಾಜು ರೂ.6 ಲಕ್ಷ ಮೌಲ್ಯದ ಎರಡು ಕಾರುಗಳನ್ನು ವಶಪಡಿಸಿಕೊಳ್ಳಲಾಗಿದೆ. ವಶಪಡಿಸಿಕೊಂಡ ಒಟ್ಟು ಸೊತ್ತುಗಳ ಮೌಲ್ಯ ಸುಮಾರು ರೂ.6.50 ಲಕ್ಷಗಳಾಗಿವೆ. ಈ ಕುರಿತು ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದಿನಾಂಕ 24-01-2026 ರಂದು ಅ.ಕ್ರ.ಸಂ.13/2026 ಕಲಂ 8(c), 21(b) NDPS ಕಾಯ್ದೆ ಹಾಗೂ 25(1B)(B) Arms Act ಅಡಿಯಲ್ಲಿ ಪ್ರಕರಣ ದಾಖಲಾಗಿದೆ.

ಪುತ್ತೂರು ಗ್ರಾಮಾಂತರ ಠಾಣೆಯ ಪೊಲೀಸ್ ಉಪನಿರೀಕ್ಷಕ ಗುಣಪಾಲ ಜೆ. ಅವರ ನೇತೃತ್ವದಲ್ಲಿ ನಡೆದ ಈ ಕಾರ್ಯಾಚರಣೆಯಲ್ಲಿ ಉಪನಿರೀಕ್ಷಕಿ ಸುಶ್ಮಾ ಭಂಡಾರಿ ಹಾಗೂ ಸಿಬ್ಬಂದಿ ಮುರುಗೇಶ್ ಪರಮೇಶ್ವರ, ಸತೀಶ್, ಸುಬ್ರಹ್ಮಣ್ಯ, ಹರೀಶ್, ನಾಗೇಶ್, ಭವಿತ್ ರೈ, ವಿನೋದ್, ನಾಗರಾಜ್, ಕಾರ್ತಿಕ್ ಸೇರಿದಂತೆ ವಿಶೇಷ ತಂಡದ ಅದ್ರಾಮ್, ಪ್ರಶಾಂತ್ ಎಂ., ಪ್ರವೀಣ್ ರೈ, ಪ್ರಶಾಂತ್ ರೈ, ಹರ್ಷಿತ್, ಸಂಪತ್ ಹಾಗೂ ಸೋಕೋ ತಂಡದ ಸಿಬ್ಬಂದಿ ಭಾಗವಹಿಸಿದ್ದರು.
