ಉಡುಪಿ: ಮಲ್ಪೆ ವ್ಯಾಪ್ತಿಗೆ ಬರುವ ಕೋಡಿಬೆಂಗ್ರೆಯಲ್ಲಿರುವ ಡೆಲ್ಟಾ ಬೀಚ್ ನಲ್ಲಿ ಸಂಭವಿಸಿದ ಪ್ರವಾಸಿ ಬೋಟ್ ದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಚಿಕಿತ್ಸೆ ಫಲಕಾರಿಯಾಗದೆ ಮಂಗಳವಾರ(ಜ.27) ಮತ್ತೋರ್ವ ಯುವತಿ ಸಾವನ್ನಪ್ಪಿದ್ದಾರೆ.

ಮೈಸೂರಿನ ದಿಶಾ(23) ಮೃತ ಯುವತಿ.

ಸೋಮವಾರ(ಜ.26)ದಂದು ಸಿಂಧು ಮತ್ತು ಶಂಕರಪ್ಪ ಎಂಬುವವರು ಮೃತಪಟ್ಟಿದ್ದರು. ಸದ್ಯ ಧರ್ಮರಾಜ್ ಎಂಬ ಯುವಕನಿಗೆ ಚಿಕಿತ್ಸೆ ಮುಂದುವರೆದಿದೆ.

ಮಲ್ಪೆ: ಪ್ರವಾಸಿಗರ ದೋಣಿ ಮಗುಚಿ ಬಿದ್ದು ಹಲವರು ಅಸ್ವಸ್ಥ- ಇಬ್ಬರು ಗಂಭೀರ
ಮಲ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.