ಕ್ರಿಕೆಟ್ ಗ್ರೌಂಡ್ ನಲ್ಲಿ ನಡೆದ ಗಲಾಟೆ ಕೊ*ಲೆಯಲ್ಲಿ ಅಂತ್ಯ !

ಬೆಂಗಳೂರು: ಕ್ರಿಕೆಟ್ ಗ್ರೌಂಡ್ ನಲ್ಲಿ ನಡೆದ ಗಲಾಟೆ ಕೊ*ಲೆಯಲ್ಲಿ ಅಂತ್ಯವಾಗಿರುವ ಘಟನೆ ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲ್ಲೂಕಿನ ಹೆಬ್ಬಗೋಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ವೀರಸಂದ್ರ ನಿವಾಸಿ ಪ್ರಶಾಂತ್(28) ಕೊಲೆಯಾದ ಯುವಕ. ಬ್ರಹ್ಮಾವರ ಮೂಲದ ರೋಷನ್ ಹೆಗ್ಗಡೆ ಬಂಧಿತ ಆರೋಪಿ.

ಕಮ್ಮಸಂದ್ರದ ಕ್ರಿಕೆಟ್ ಆಟದ ಮೈದಾನದಲ್ಲಿ ಈ ಕೃತ್ಯ ನಡೆದಿದ್ದು, ಬ್ರಹ್ಮಾವರ ಮೂಲದ ರೋಷನ್ ಹೆಗ್ಗಡೆ ದೊಮ್ಮಲೂರಿನ ಸಾಫ್ಟ್‌ ವೇರ್ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರು. ವೀರಸಂದ್ರ ನಿವಾಸಿಯಾಗಿರುವ ಪ್ರಶಾಂತ್ ಕೂಡ ಖಾಸಗಿ ಕಂಪನಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದರು ಎನ್ನಲಾಗಿದೆ.

ಕಮ್ಮಸಂದ್ರದಲ್ಲಿ ಕ್ರಿಕೆಟ್ ಪಂದ್ಯಾವಳಿ ಆಯೋಜಿಸಿದ್ದು, ಇಬ್ಬರೂ ಮೈದಾನಕ್ಕೆ ಬಂದಿದ್ದರು. ಈ ವೇಳೆ ಇಬ್ಬರ ನಡುವೆ ಗಲಾಟೆಯಾಗಿ ಹೊಡೆದಾಡಿಕೊಂಡಿದ್ದಾರೆ. ಸ್ಥಳದಲ್ಲಿದ್ದವರು ಇಬ್ಬರನ್ನೂ ಸಮಾಧಾನಪಡಿಸಿದ್ದಾರೆ. ನಂತರ ರೋಶನ್ ಹೆಗಡೆ ತಮ್ಮ ಕಾರಿನಲ್ಲಿ ಮನೆಗೆ ಹೊರಟಿದ್ದಾಗ ಕಾರಿನ ಫುಟ್ ರೆಸ್ಟ್ ಮೇಲೆ ನಿಂತು ಪ್ರಶಾಂತ್ ನಿಂದಿಸಿದ್ದಾನೆ. ಇದರಿಂದ ಆಕ್ರೋಶಗೊಂಡ ಆರೋಪಿ ರೋಷನ್ ವೇಗವಾಗಿ ಕಾರು ಚಾಲನೆ ಮಾಡಿಕೊಂಡು ಬಂದು ರಸ್ತೆ ಬದಿಯ ಮರಕ್ಕೆ ಡಿಕ್ಕಿ ಹೊಡೆದಿದ್ದಾರೆ. ಈ ವೇಳೆ ಪ್ರಶಾಂತ್ ತಲೆ ಮತ್ತು ಎದೆಗೆ ಗಂಭೀರ ಗಾಯವಾಗಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಕೊಲೆಯ ದೃಶ್ಯ ಕಾರಿನ ಮುಂಭಾಗದ ಕ್ಯಾಮರಾದಲ್ಲಿ ಸೆರೆಯಾಗಿದೆ. ಪ್ರಶಾಂತನ ಕೊಲೆ ಮಾಡಲಾಗಿದೆ ಅಂತ ಪೋಷಕರು ಗಂಭೀರವಾಗಿ ಆರೋಪ ಮಾಡಿದ್ದಾರೆ. \

ಹೆಬ್ಬಗೋಡಿ ಪೊಲೀಸ್ ಠಾಣೆಯಲ್ಲಿ ಈ ಕುರಿತು ಕೊಲೆ ಪ್ರಕರಣ ದಾಖಲಾಗಿದೆ

error: Content is protected !!