ಕುಡಿದ ಮತ್ತಿನಲ್ಲಿ ವಾಹನ ಚಲಾಯಿಸಿ ಸರಣಿ ಅಪಘಾತ; ನಟ ಮಯೂರ್‌ ಪಟೇಲ್‌ ಕಾರು ಜಪ್ತಿ

ಬೆಂಗಳೂರು: ನಟ ಮಯೂರ್ ಪಟೇಲ್ ಮದ್ಯದ ನಶೆಯಲ್ಲಿ ಫಾರ್ಚೂರನರ್ ಕಾರನ್ನು ಅತೀ ವೇಗವಾಗಿ ಓಡಿಸಿ ನಿಂತಿದ್ದ ಕಾರುಗಳಿಗೆ ಡಿಕ್ಕಿ ಹೊಡೆದು ಸರಣಿ ಅಪಘಾತಕ್ಕೆ ಕಾರಣವಾದ ಘಟನೆ ಬುಧವಾರ(ಜ.28) ತಡರಾತ್ರಿ ದೊಮ್ಮಲೂರು ಬಳಿಯ ಕಮಾಂಡೋ ಆಸ್ಪತ್ರೆ ಬಳಿ ನಡೆದಿದೆ.

ನಾಲ್ಕು ಕಾರುಗಳು ಜಖಂಗೊಂಡಿವೆ. ಅದೃಷ್ಟವಶಾತ್ ಯಾರೊಬ್ಬರಿಗೂ ಗಾಯವಾಗಿಲ್ಲ.

ಶ್ರೀನಿವಾಸ್ ಎನ್ನುವವರು ನೀಡಿದ ದೂರಿನ ಆಧಾರದ ಮೇಲೆ ಕನ್ನಡದ ಕೆಲವು ಚಿತ್ರಗಳಲ್ಲಿ ನಾಯಕ ನಟನಾಗಿ ನಟಿಸಿರುವಂತಹ ಮಯೂರ್ ಪಟೇಲ್ ವಿರುದ್ಧ ಹಲಸೂರು ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕಾರನ್ನು ಪೊಲೀಸರು ಜಪ್ತಿ ಮಾಡಿದ್ದು, ಇನ್ಸೂರೆನ್ಸ್ ಕೂಡ ಮಾಡಿರಲಿಲ್ಲ ಎಂದು ಹೇಳಲಾಗಿದೆ.

error: Content is protected !!