ಕೆ.ಎಸ್.​​ಆರ್.​​​ಟಿ.ಸಿ. ಬಸ್, ಬೊಲೆರೋ ಮುಖಾಮುಖಿ ಡಿಕ್ಕಿ: 8 ಮಂದಿಗೆ ಗಾಯ

ಕಾರವಾರ: ಕೆಎಸ್​​ಆರ್​​​ಟಿಸಿ ಬಸ್ ಹಾಗೂ ಬೊಲೆರೋ ವಾಹನ ಮುಖಾಮುಖಿ ಡಿಕ್ಕಿಯಾಗಿ ಬೊಲೆರೋ ವಾಹನ ಚಾಲಕ ಹಾಗೂ ಬಸ್‌ನಲ್ಲಿದ್ದ ಏಳು ಜನ ಗಾಯಗೊಂಡಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ರಾಷ್ಟ್ರೀಯ ಹೆದ್ದಾರಿ–66ರ ಮಾನೀರು ದೇವಸ್ಥಾನದ ಬಳಿ ನಡೆದಿದೆ.

ಕಾರವಾರ ಮೂಲದ ಬೊಲೆರೋ ವಾಹನ ಚಾಲಕ ಡೇವಿಡ್ ಪಾಸ್ಕಲ್ ಅವರಿಗೆ ಗಂಭೀರ ಗಾಯಗಳಾಗಿದ್ದು, ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಉಳಿದ ಗಾಯಾಳುಗಳನ್ನು ಕುಮಟಾ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಕಾರವಾರದಿಂದ ಕುಮಟಾಗೆ ಮೀನು ತುಂಬಿಕೊಂಡು ತೆರಳಿದ್ದ ಬೊಲೆರೋ ವಾಹನ, ಕುಮಟಾದಿಂದ ಕಾರವಾರದ ಕಡೆಗೆ ತೆರಳುತ್ತಿದ್ದ ಕೆಎಸ್​​ಆರ್​​​ಟಿಸಿ ಬಸ್ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ.

ಘಟನೆಯ ಕುರಿತು ಕುಮಟಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.

error: Content is protected !!