
ಕೊಡಗು: ಕಾಲೇಜು ವಿದ್ಯಾರ್ಥಿಯೊಬ್ಬ ಹಲವಾರು ಯುವತಿಯರೊಂದಿಗೆ ರಾಸಲಿಲೆ ನಡೆಸಿ ವಿಡಿಯೋ ಚಿತ್ರೀಕರಿಸಿ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಮಾಡಿರುವ ಘಟನೆ ಬೆಳಕಿಗೆ ಬಂದಿದ್ದು, ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

ಕೊಡಗು ಜಿಲ್ಲೆಯ ಮಡಿಕೇರಿ ತಾಲೂಕಿನ ನಾಪೋಕ್ಲು ಮೂಲದ ಮೊಹಮ್ಮದ್ ಸವದ್ ಬಂಧಿತ ಯುವಕ.
ಈತ ಬೆಂಗಳೂರಿನ ಸಂಪಿಗೆಹಳ್ಳಿಯ ಯೆನಪೋಯ ಕಾಲೇಜಿನಲ್ಲಿ ಬಿಬಿಎಂ ವಿದ್ಯಾರ್ಥಿ ಎಂದು ತಿಳಿದುಬಂದಿದೆ. ಯುವತಿಯರನ್ನು ಕೊಡಗಿಗೆ ಕರೆದೊಯ್ದು ರಾಸಲೀಲೆ ನಡೆಸಿ ಅದರ ವಿಡಿಯೋವನ್ನು ತನ್ನದೇ ಮೊಬೈಲ್ ನಲ್ಲಿ ಚಿತ್ರೀಕರಿಸಿಕೊಂಡು ಬಳಿಕ ಸೋಷಿಯಲ್ ಮೀಡಿಯಾಗಳಲ್ಲಿ ಹರಿಬಿಟ್ಟಿದ್ದಾನೆ ಎಂದು ತಿಳಿದುಬಂದಿದೆ. ವಿಡಿಯೋದಲ್ಲಿ ಸ್ಥಳೀಯ ರಾಜಕಾರಣಿಗಳ ಪುತ್ರಿಯರು, ಅನ್ಯ ಧರ್ಮದ ಯುವತಿಯರೂ ಇದ್ದಾರೆ ಎಂಬ ಆರೋಪ ಕೇಳಿಬಂದಿದೆ.

ವಿಡಿಯೋ ವೈರಲ್ ಆಗುತ್ತಿದ್ದಂತೆ ಜಿಲ್ಲೆಯಾದ್ಯಂತ ಆಕ್ರೋಶ ವ್ಯಕ್ತವಾಗಿದ್ದು, ಕೊಡಗು ಅಭಿವೃದ್ಧಿ ಸಮಿತಿ ಅಧ್ಯಕ್ಷ ಪ್ರಸನ್ನ ಭಟ್ ಮಡಿಕೇರಿ ಗ್ರಾಮಾಂತರ ಠಾಣೆಯಲ್ಲಿ ದೂರು ದಾಖಲಿಸಿದ್ದು ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.