
ಕೊಪ್ಪಳ: ಕೊಪ್ಪಳದ ಸರ್ಕಾರಿ ವೈದ್ಯಕೀಯ ಕಾಲೇಜು(KIMS) ಆಡಳಿತಾಧಿಕಾರಿ ಬಿ. ಕಲ್ಲೇಶ್ ಅವರ ಮನೆ, ಕಾಲೇಜು, ಕಚೇರಿ, ಬ್ಯಾಂಕ್ ಸೇರಿದಂತೆ ಒಟ್ಟು ಐದು ಕಡೆಗಳಲ್ಲಿ ರಾಯಚೂರು ಲೋಕಾಯುಕ್ತ ಡಿಎಸ್ಪಿ ಲೋಕೇಶ್ ಅವರ ನೇತೃತ್ವದಲ್ಲಿ ಲೋಕಾಯುಕ್ತ ಅಧಿಕಾರಿಗಳು ಇಂದು(ಜ30) ಬೆಳಗ್ಗೆ ದಾಳಿ ನಡೆಸಿದ್ದಾರೆ.
ಕೊಪ್ಪಳ ಸಮೀಪದ ಭಾಗ್ಯನಗರದಲ್ಲಿರುವ ನವಚೇತನ ಕಾಲೇಜು, ಕಲ್ಲೇಶ್ ಅವರ ನಿವಾಸ, ಸ್ವಂತ ಕಚೇರಿ, ಸಹಕಾರಿ ಬ್ಯಾಂಕ್ ಹಾಗೂ ಅವರ ಸಂಬಂಧಿಕರ ಮನೆಗಳ ಮೇಲೂ ಲೋಕಾಯುಕ್ತ ತಂಡಗಳು ಏಕಕಾಲದಲ್ಲಿ ದಾಳಿ ನಡೆಸಿ ಶೋಧ ಕಾರ್ಯಾಚರಣೆ ನಡೆಸುತ್ತಿದೆ.
ಕೊಪ್ಪಳ, ರಾಯಚೂರು, ಗದಗ, ಹಾವೇರಿ ಸೇರಿದಂತೆ ವಿವಿಧ ಜಿಲ್ಲೆಗಳಿಂದ ಐದು ಲೋಕಾಯುಕ್ತ ತಂಡಗಳು ದಾಳಿ ನಡೆಸಿವೆ. ದಾಳಿ ವೇಳೆ ದಾಖಲೆಗಳ ಪರಿಶೀಲನೆ ಹಾಗೂ ಮಹತ್ವದ ದಾಖಲೆಗಳ ಶೋಧನೆ ಕಾರ್ಯ ಮುಂದುವರಿದಿದೆ.