ಮದುಮಗನ ಕೊಲೆಯತ್ನ: ಇಂದು ನಡೆಯಬೇಕಿದ್ದ ಮದುವೆ ರದ್ದು

ಮೈಸೂರು: ಇಂದು ಮದುವೆಯಾಗಬೇಕಿದ್ದ ಯುವಕನ ಮೇಲೆ ದುಷ್ಕರ್ಮಿಗಳು ನಿನ್ನೆ ರಾತ್ರಿ ಮದುವೆ ಛತ್ರಕ್ಕೆ ಆಗಮಿಸುತ್ತಿದ್ದ ವೇಳೆ ದಾಳಿ ನಡೆಸಿ ಕೊಲೆಗೆ ಯತ್ನಿಸಿದ ಪರಿಣಾಮ ಇಂದು ನಿಗದಿಯಾಗಿದ್ದ ಮದುವೆ ರದ್ದಾದ ಘಟನೆ ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲದಲ್ಲಿ ನಡೆದಿದೆ. ಕೊಳ್ಳೇಗಾಲ ತಾಲ್ಲೂಕಿನ ಕುಣಿಗಳ್ಳಿ ಗ್ರಾಮದ ರವೀಶ್ ಘಟನೆಯಲ್ಲಿ ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ.

ರವೀಶ್‌ ಮೇಲೆ ಇಲ್ಲಿನ ಎಂ.ಜಿಎಸ್.ವಿ ಕಾಲೇಜು ರಸ್ತೆಯಲ್ಲಿ 4–5 ಜನರಿದ್ದ ದುಷ್ಕರ್ಮಿಗಳ ಗುಂಪೊಂದು ಕಾರಿನಲ್ಲಿ ಬಂದು ದಾಳಿ ನಡೆಸಿದೆ. ಈ ವೇಳೆ ದುಷ್ಕರ್ಮಿಗಳು ವರ ರವೀಶ್‌ಗೆ ಚಾಕು ಇರಿದು ಹಲ್ಲೆ ನಡೆಸಿದ್ದಾರೆ. ಗಾಯಗೊಂಡ ರವೀಶ್ ಅವರನ್ನು ತಕ್ಷಣವೇ ಕೊಳ್ಳೇಗಾಲ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ಕೊಳ್ಳೇಗಾಲ ಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

error: Content is protected !!