ರಾಜ್ಯದ 6 ಸಾವಿರ ಪಂಚಾಯತ್‌ಗಳಿಗೆ ಮಹಾತ್ಮಾ ಗಾಂಧಿಯ ಹೆಸರಿಡಬೇಕು: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಮಹಾತ್ಮ ಗಾಂಧಿಯ ಹುತಾತ್ಮ ದಿನಾಚರಣೆ ಅಂಗವಾಗಿ ಗಾಂಧೀಜಿಯವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಹಳ್ಳಿಯಿಂದ ದಿಲ್ಲಿಯೇ ಹೊರತು, ದಿಲ್ಲಿಯಿಂದ ಹಳ್ಳಿ ಅಲ್ಲ ಎಂದು ಪ್ರತಿಪಾದಿಸಿದ ಮಹಾತ್ಮಾ ಗಾಂಧೀಜಿಯವರು ಗ್ರಾಮಸ್ವರಾಜ್ಯದ ಕಲ್ಪನೆಗೆ ಶಕ್ತಿ ತುಂಬಿದರು ಎಂದು ಹೇಳಿದರು.

ಗಾಂಧೀಜಿಯವರು ದೇಶಕ್ಕೆ ನೀಡಿದ ಕೊಡುಗೆಯನ್ನು ಇಂದಿನ ದಿನ ಸ್ಮರಿಸಲಾಗುತ್ತಿದೆ. ಭಾರತ ಹಳ್ಳಿಗಳ ದೇಶವಾಗಿದ್ದು, ಅಂದು ಶೇ.80 ರಷ್ಟು ಜನ ಹಳ್ಳಿಗಳಲ್ಲಿ ವಾಸಿಸುತ್ತಿದ್ದರು. ಗ್ರಾಮಗಳು ಸಾಮಾಜಿಕವಾಗಿ, ಆರ್ಥಿಕವಾಗಿ, ಶೈಕ್ಷಣಿಕವಾಗಿ ಹಾಗೂ ರಾಜಕೀಯವಾಗಿ ಸ್ವಾವಲಂಬಿಯಾಗಬೇಕು. ಗ್ರಾಮಗಳ ಪ್ರಗತಿಯಲ್ಲಿಯೇ ದೇಶದ ಪ್ರಗತಿ ಅಡಗಿದೆ ಎಂದು ಅವರು ನುಡಿದಿದ್ದರು ಎಂದು ಹೇಳಿದರು.

ರಾಜ್ಯದಲ್ಲಿ ಸುಮಾರು 6 ಸಾವಿರ ಪಂಚಾಯತ್‌ಗಳಿದೆ, ಅವುಗಳಿಗೆ ಮಹಾತ್ಮಾ ಗಾಂಧಿಯವರ ಹೆಸರು ಇಡಬೇಕೆಂಬ ನಿರ್ಧಾರವನ್ನು ಕೈಗೊಳ್ಳಲಿದ್ದೇವೆ. ಗ್ರಾಮಸ್ವರಾಜ್ಯದ ಕಲ್ಪನೆಗೆ ಶಕ್ತಿ ತುಂಬಿದ್ದರು. ಹಳ್ಳಿಯಿಂದ ದಿಲ್ಲಿಯೇ ಹೊರತು, ದಿಲ್ಲಿಯಿಂದ ಹಳ್ಳಿಯಿಂದ ಅಲ್ಲ ಎಂಬುದನ್ನು ಪ್ರತಿಪಾದಿಸಿದ್ದುದಾಗಿ ತಿಳಿಸಿದರು.

ಇಂತಹ ಮಹಾನ್ ವ್ಯಕ್ತಿ ಗುಂಡೇಟಿಗೆ ಬಲಿಯಾಗಿ ನಮ್ಮನ್ನು ಅಗಲಿದ್ದಾರೆ.

error: Content is protected !!