ಬಂಟ್ವಾಳ: ಕಾರು ಡಿಕ್ಕಿಯಾಗಿ ಸ್ಕೂಟರ್ ಸವಾರ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ಬಂಟ್ವಾಳದ ಪಾಣೆಮಂಗಳೂರು ಸರ್ವೀಸ್ ರಸ್ತೆಯಲ್ಲಿ ನಡೆದಿದೆ.

ನರಿಕೊಂಬು ನಿವಾಸಿ ಮುಸ್ತಫಾ ಗಾಯಗೊಂಡ ಸ್ಕೂಟರ್ ಸವಾರ.
ಸ್ಕೂಟರ್ ಸವಾರ ಮುಸ್ತಫಾ ಅವರು ನರಿಕೊಂಬು ರಸ್ತೆಯಿಂದ ಅಂಡರ್ ಪಾಸ್ ನ ಮೂಲಕ ಪಾಣೆಮಂಗಳೂರು ರಸ್ತೆಯನ್ನು ದಾಟುವ ವೇಳೆ ಮೆಲ್ಕಾರ್ ಕಡೆಯಿಂದ ಸರ್ವೀಸ್ ರಸ್ತೆಯಲ್ಲಿ ಬರುತ್ತಿದ್ದ ಸ್ವಿಫ್ಟ್ ಕಾರು ಪಾಣೆಮಂಗಳೂರು ಕಲ್ಲುರ್ಟಿ ದೇವಸ್ಥಾನದ ಮುಂಭಾಗದ ರಸ್ತೆಯಲ್ಲಿ ಡಿಕ್ಕಿಯಾಗಿದೆ.

ಡಿಕ್ಕಿಯ ರಭಸಕ್ಕೆ ಸ್ಕೂಟರ್ ಸವಾರ ಸರ್ವಿಸ್ ರಸ್ತೆಗೆ ಎಸೆಯಲ್ಪಟ್ಟು ತಲೆಗೆ ಹಾಗೂ ಇನ್ನಿತರ ಭಾಗಗಳಿಗೆ ಗಾಯವಾಗಿದೆ. ಗಾಯಾಳು ಮುಸ್ತಫಾ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.