ಕಾಸರಗೋಡು: ತಂದೆಯೇ ಮಗಳನ್ನು ಕಡಿದು ಕೊಲೆಗೈದ ಹೃದಯವಿದ್ರಾಹಕ ಘಟನೆ ಮಂಜೇಶ್ವರ ಸಮೀಪದ ಕುಂಜತ್ತೂರು ತೂಮಿನಾಡು ಎಂಬಲ್ಲಿ ಸೋಮವಾರ(ಫೆ.2) ಸಂಜೆ ವೇಳೆ ನಡೆದಿದೆ.

ತೂಮಿನಾಡಿನ ಜುಮೈಲಾ ಹತ್ಯೆಗೀಡಾದ ಯುವತಿ. ತಂದೆ ಉಮ್ಮರ್ ಫಾರೂಕ್ ಬಂಧಿತ ಆರೋಪಿ.
ಕಿರುಚಾಟದ ಶಬ್ದ ಕೇಳಿ ಸ್ಥಳೀಯರು ಸ್ಥಳಕ್ಕೆ ಬಂದಾಗ ಬಾಲಕಿ ರಕ್ತದ ಮಡುವಿನಲ್ಲಿ ಬಿದ್ದಿರುವುದು ಕಂಡುಬಂದಿದೆ. ಕೂಡಲೇ ಆಸ್ಪತ್ರೆಗೆ ದಾಖಲಿಸಿದರೂ ಜೀವ ಉಳಿಸಲಾಗಲಿಲ್ಲ. ಕೃತ್ಯ ನಡೆಯುವ ಸಮಯದಲ್ಲಿ ತಾಯಿ ಕೂಡಾ ಮನೆಯಲ್ಲಿದ್ದರು ಎನ್ನಲಾಗಿದೆ.

ವಿದೇಶದಲ್ಲಿದ್ದ ಉಮ್ಮರ್ ಫಾರೂಕ್ ಮೂರು ತಿಂಗಳ ಹಿಂದಷ್ಟೇ ಊರಿಗೆ ಬಂದಿದ್ದನು. ಆಸ್ತಿಗಾಗಿ ಕುಟುಂಬದಲ್ಲಿ ಜಗಳ ನಡೆಯುತ್ತಿತ್ತು ಎನ್ನಲಾಗುತ್ತಿದೆ.

ಪೊಲೀಸರು ಸ್ಥಳಕ್ಕೆ ಆಗಮಿಸಿದ್ದು, ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.