ಅಕ್ರಮ ಸಂಬಂಧದ ಗಲಾಟೆ ಓರ್ವನ ಕೊಲೆಯಲ್ಲಿ ಅಂತ್ಯ;  ಕಮಲಾಕರ್ ಭಟ್ ಗುರೂಜಿ ಸೇರಿ 7 ಮಂದಿ ಬಂಧನ

ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನ ಅವರಗುಪ್ಪ ಗ್ರಾಮದಲ್ಲಿ ಅಕ್ರಮ ಸಂಬಂಧದ ವಿಚಾರವಾಗಿ ನಡೆದ ಗಲಾಟೆ ವ್ಯಕ್ತಿಯೊಬ್ಬರ ಸಾವಿಗೆ ಕಾರಣವಾಗಿದೆ. ಈ ಘಟನೆಯಲ್ಲಿ ವಸಂತ್ ನಾಯ್ಕ್ ಮೃತಪಟ್ಟಿದ್ದು, ಮಹೇಶ್ ನಾಯ್ಕ್ ಹಾಗೂ ಕುಮಾರ್ ಎಂಬವರು ಗಂಭೀರವಾಗಿ ಗಾಯಗೊಂಡಿದ್ದಾರೆ.


ಸುಚಿತ್ರಾ ಎಂಬಾಕೆ ಗಂಡನಿಂದ ಬೇರ್ಪಟ್ಟು ಶಿವಮೊಗ್ಗದಲ್ಲಿ ಜ್ಯೋತಿಷಿ ಕಮಲಾಕರ ಭಟ್ ಕಚೇರಿಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದು, ಅವರ ಮನೆಯಲ್ಲಿಯೇ ಇಬ್ಬರು ಹೆಣ್ಣುಮಕ್ಕಳೊಂದಿಗೆ ವಾಸವಾಗಿದ್ದಳು. ಸುಚಿತ್ರಾ ಜ್ಯೋತಿಷಿ ಕಮಲಾಕರ್ ಭಟ್ ಜೊತೆ ಅಕ್ರಮ ಸಂಬಂಧ ಹೊಂದಿದ್ದಾಳೆ ಎನ್ನಲಾಗಿದೆ. ಇದು ಈ ಸುಚಿತ್ರಾಳ ಹಿರಿಯ ಮಗಳು ತಿಳಿದು ತಾಯಿ ವರ್ತನೆಯನ್ನು ಪ್ರಶ್ನಿಸಿ ವಿಚಾರವನ್ನು ತಂದೆ ಮಹೇಶ್ ನಾಯ್ಕ್ ಅವರಿಗೆ ತಿಳಿಸಿದ್ದಾಳೆ.

ಉತ್ತರ ಕನ್ನಡ: ಗುರೂಜಿ ಜೊತೆ ಮಹಿಳೆ ಅಕ್ರಮ ಸಂಬಂಧ: ದೂರ ನೀಡಿದ್ದ ಹತ್ಯೆ; ಜೋತಿಷಿ ಕಮಲಾಕರ್ ಭಟ್ ಸೇರಿ 7 ಮಂದಿ ಬಂಧನ

ಪತ್ನಿಯ ಅಕ್ರಮ ಸಂಬಂಧದ ಬಗ್ಗೆ ತಿಳಿದ ಮಹೇಶ್ ನಾಯ್ಕ್ ಬೆಂಗಳೂರಿನಿಂದ ಸಿದ್ದಾಪುರಕ್ಕೆ ಬಂದು ಪೊಲೀಸ್ ಠಾಣೆಗೆ ದೂರು ದಾಖಲಿಸಿದ್ದರು. ದೂರು ನೀಡಿದ ಬಳಿಕ ಅವರು ತಮ್ಮ ಸಹೋದರ ವಸಂತ್ ನಾಯ್ಕ್ ಮನೆಗೆ ತೆರಳಿದ್ದರು.

ತಮ್ಮ ವಿರುದ್ಧ ದೂರು ನೀಡಿರುವ ವಿಚಾರ ತಿಳಿದ ಸುಚಿತ್ರಾ, ಆಕೆಯ ತಂದೆ ಲೋಕನಾಥ್ ಹಾಗೂ ಸಹಚರರೊಂದಿಗೆ ವಸಂತ್ ಮನೆಗೆ ತೆರಳಿ ಗಲಾಟೆ ನಡೆಸಿದ್ದಾರೆ. ಈ ವೇಳೆ ಮಹೇಶ್ ನಾಯ್ಕ್, ವಸಂತ್ ನಾಯ್ಕ್ ಮತ್ತು ಕುಮಾರ್ ಮೇಲೆ ಮನಬಂದಂತೆ ಹಲ್ಲೆ ನಡೆಸಲಾಗಿದೆ. ಜಗಳ ಬಿಡಿಸಲು ಬಂದಿದ್ದ ವಸಂತ್‌ ನಾಯ್ಕ್‌ಗೆ ಚೂರಿಯಿಂದ ಇರಿಯಲಾಗಿದ್ದು, ಗಂಭೀರವಾಗಿ ಗಾಯಗೊಂಡ ಇವರನ್ನು ಆಸ್ಪತ್ರೆಗೆ ಕರೆದೊಯ್ಯುವಾಗ ಮಾರ್ಗಮಧ್ಯೆ ಮೃತಪಟ್ಟಿದ್ದಾರೆ. ಉಳಿದ ಇಬ್ಬರು ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಘಟನೆಯ ಬಳಿಕ ಪರಾರಿಯಾಗಲು ಯತ್ನಿಸಿದ ಜ್ಯೋತಿಷಿ ಕಮಲಾಕರ್ ಭಟ್, ಸುಚಿತ್ರಾ ಸೇರಿದಂತೆ ನಾಲ್ವರನ್ನು ಸಿದ್ದಾಪುರದಲ್ಲಿ ಹಾಗೂ ಮೂವರನ್ನು ಶಿವಮೊಗ್ಗದಲ್ಲಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಒಟ್ಟು ಏಳು ಮಂದಿಯನ್ನು ಬಂಧಿಸಲಾಗಿದೆ.

ಅನೈತಿಕ ಸಂಬಂಧ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಆರೋಪಿಗಳ ವಿರುದ್ಧ ಎಫ್‌ಐಆರ್ ದಾಖಲಾಗಿದ್ದು, ಸಿದ್ದಾಪುರ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

error: Content is protected !!