ಬೆಳ್ತಂಗಡಿ: ದ್ವೇಷ ಭಾಷಣ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿಯಾಗಿದ್ದ ಜಾಮೀನುರಹಿತ ವಾರೆಂಟ್ ಕುರಿತು ಮಹೇಶ್ ಶೆಟ್ಟಿ ತಿಮರೋಡಿ ಅವರು ಬಂಟ್ವಾಳ ನ್ಯಾಯಾಲಯದಲ್ಲಿ ಸಲ್ಲಿಸಿದ ಅರ್ಜಿಯನ್ನು ನ್ಯಾಯಾಲಯ ಪರಿಗಣಿಸಿ ಜಾಮೀನು ಮಂಜೂರು ಮಾಡಿದೆ.

ಬೆಳ್ತಂಗಡಿ ಪೊಲೀಸರ ತನಿಖೆಯಲ್ಲಿ ದ್ವೇಷ ಭಾಷಣದ ಆರೋಪದಡಿ ಮಹೇಶ್ ಶೆಟ್ಟಿ ವಿರುದ್ಧ ಪ್ರಕರಣ ದಾಖಲಾಗಿತ್ತು. ಅವರ ಹಾಜರಾತಿ ಇಲ್ಲದ ಕಾರಣ, ಬೆಳ್ತಂಗಡಿ ನ್ಯಾಯಾಲಯವು ಜಾಮೀನುರಹಿತ ವಾರೆಂಟ್ ಜಾರಿಗೊಳಿಸಿತ್ತು.

ಈ ಸಂದರ್ಭದಲ್ಲಿ ಮಹೇಶ್ ಶೆಟ್ಟಿ ಬಂಟ್ವಾಳ ನ್ಯಾಯಾಲಯಕ್ಕೆ ಜಾಮೀನು ಅರ್ಜಿ ಸಲ್ಲಿಸಿ, ತಮ್ಮ ಪರವಾಗಿ ನ್ಯಾಯವಾದಿ ಸಿರಾಜುದ್ದೀನ್ ಜೋಗಿಬೆಟ್ಟು ವಾದ ಮಂಡಿಸಿದ್ದರು. ನ್ಯಾಯಾಲಯ ಈ ವಾದವನ್ನು ಪರಿಗಣಿಸಿ ಜಾಮೀನು ಮಂಜೂರು ಮಾಡಿ ಆದೇಶ ಹೊರಡಿಸಿದೆ.
