
ಗಾಜಿಯಾಬಾದ್: ಆನ್‌ಲೈನ್ ಗೇಮಿಂಗ್ ಅಪ್ಲಿಕೇಶನ್‌ಗೆ ವ್ಯಸನಿಯಾಗಿದ್ದ ಮೂವರು ಸಹೋದರಿಯರು ವಸತಿ ಕಟ್ಟಡದ ಒಂಬತ್ತನೇ ಮಹಡಿಯಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಭಾರತ್ ಸಿಟಿ ಪ್ರದೇಶದಲ್ಲಿ ಇಂದು(ಫೆ.4) ನಸುಕಿನ 2:30ರ ಸುಮಾರಿಗೆ ನಡೆದಿದೆ.

ಕೊರಿಯನ್ ಮೂಲದ ನಿಶಿಕಾ (16), ಪ್ರಾಚಿ (14) ಮತ್ತು ಪಖಿ (12) ಮೃತ ಬಾಲಕಿಯರು.
ಆತ್ಮಹತ್ಯೆ ಮಾಡಿಕೊಂಡ ಬಾಲಕಿಯರು “ಮಮ್ಮಿ, ಪಾಪಾ,ಸೋರಿ” ಎಂದು ಡೆತ್ ನೋಟ್ ಬರೆದಿಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಕೋವಿಡ್ ವೇಳೆ ಆನ್‌ಲೈನ್ ಆಟಗಳಿಗೆ ವ್ಯಸನಿಯಾಗಿದ್ದರು ಮತ್ತು ಆನ್‌ಲೈನ್ ಟಾಸ್ಕ್ ಆಧಾರಿತ ‘ಕೊರಿಯನ್ ಲವ್ ಗೇಮ್’ ಆಡುತ್ತಿದ್ದರು ಎಂದು ವರದಿಯಾಗಿದೆ. ಪೊಲೀಸರ ಪ್ರಕಾರ, ಹುಡುಗಿಯರು ನಿಯಮಿತವಾಗಿ ಶಾಲೆಗೆ ಹೋಗುತ್ತಿರಲಿಲ್ಲ.
ಪೊಲೀಸರ ತಂಡ ಸ್ಥಳಕ್ಕೆ ಭೇಟಿ ನೀಡಿ ತನಿಖೆ ನಡೆಸುತ್ತಿದ್ದಾರೆ.