ಮಂಗಳೂರು: ಉಳ್ಳಾಲ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಮಾದಕ ದ್ರವ್ಯಗಳಿಗೆ ಸಂಬಂಧಿಸಿದ ಪ್ರಕರಣದಲ್ಲಿ 14 ವರ್ಷಗಳಿಂದ ತಲೆಮಾರಿಕೊಂಡಿದ್ದ ಆರೋಪಿಯನ್ನು ಉಳ್ಳಾಲ ಪೊಲೀಸರು ಬಂಧಿಸಿದ್ದಾರೆ.

ಮೊಹಮ್ಮದ್ ಸಂಶೀರ್ ಬಂಧಿತ ಆರೋಪಿ.
ಇವನು ಉಳ್ಳಾಲದ ಮುಕ್ಕಚೇರಿಯಲ್ಲಿರುವ ಶಾಜ್ಮೀನ್ ಅಪಾರ್ಟ್‌ಮೆಂಟ್, ರೂಂ ನಂ.07ರಲ್ಲಿ ವಾಸವಾಗಿದ್ದಾನೆ.

ಈ ಪ್ರಕರಣದಲ್ಲಿ ಆರೋಪಿಯು ಹಲವು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗಿರಲಿಲ್ಲ. ಇದರಿಂದ ಮಾನ್ಯ ನ್ಯಾಯಾಲಯವು ಆರೋಪಿತನ ವಿರುದ್ಧ LPC ವಾರಂಟ್ ಹೊರಡಿಸಿತ್ತು. ಪೊಲೀಸರು ನಡೆಸಿದ ಹುಡುಕಾಟದ ವೇಳೆ ಈ ದಿನ ಆರೋಪಿಯನ್ನು ಪತ್ತೆಹಚ್ಚಿ ಬಂಧಿಸಿ ಮುಂದಿನ ಕಾನೂನು ಕ್ರಮ ಕೈಗೊಂಡಿದ್ದಾರೆ.

ಪೊಲೀಸರ ಮಾಹಿತಿ ಪ್ರಕಾರ, ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.