
ಗದಗ: ಕ್ರೂಸರ್ ವಾಹನ ಮತ್ತು ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದು, 10ಕ್ಕೂ ಹೆಚ್ಚು ಮಂದಿ ಗಾಯಗೊಂಡ ಘಟನೆ ಗದಗ ಜಿಲ್ಲೆಯ ರೋಣ ತಾಲೂಕಿನ ಜಿಗಳೂರು ಕ್ರಾಸ್ ಬಳಿ ನಡೆದಿದೆ.

ಗಜೇಂದ್ರಗಡದ ಶಿವಾಜಿ ನಗರ ನಿವಾಸಿಗಳಾದ ಕೂಲಿ ಕಾರ್ಮಿಕರು ಕ್ರೂಸರ್ ವಾಹನದಲ್ಲಿ ಕೆಲಸಕ್ಕಾಗಿ ರೋಣ ಕಡೆಗೆ ತೆರಳುತ್ತಿದ್ದ ವೇಳೆ ಲಾರಿ ಡಿಕ್ಕಿಯಾದ ಪರಿಣಾಮ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದು, 10ಕ್ಕೂ ಅಧಿಕ ಜನ ಗಾಯಗೊಂಡಿದ್ದಾರೆ. ಕ್ರೂಸರ್ ವಾಹನ ಸಂಪೂರ್ಣ ನಜ್ಜುಗುಜ್ಜಾಗಿದ್ದು, ಗಾಯಾಳುಗಳಿಗೆ ಸಗದಗ ಜಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.


ಅಪಘಾತದ ಸ್ಥಳಕ್ಕೆ ರೋಣ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.