ರಾಜ್ಯಾದ್ಯಂತ ಸಿಐಡಿ ದಾಳಿ; 13 ಪ್ರಮುಖ ಸೈಬರ್ ವಂಚಕರ ಬಂಧನ

ಬೆಂಗಳೂರು: ಸಿಐಡಿ ಸೈಬರ್ ಕ್ರೈಂ (CID) ವಿಭಾಗವು ಮ್ಯೂಲ್ ಅಕೌಂಟ್‌ಗಳ ಮೂಲಕ ನಡೆಯುತ್ತಿದ್ದ ಭಾರೀ ಸೈಬರ್ ವಂಚನಾ ದಂಧೆಯನ್ನು ಭೇದಿಸಿದ್ದು, ಏಕಕಾಲಕ್ಕೆ ನೂರಾರು ಕಡೆ ದಾಳಿ ನಡೆಸಿದ್ದ ಸಿಐಡಿ ತಂಡಗಳು, ಅಕ್ರಮಕ್ಕಾಗಿ ಬಳಸಲಾಗುತ್ತಿದ್ದ 40 ಸಾವಿರಕ್ಕೂ ಹೆಚ್ಚು ಮ್ಯೂಲ್ ಅಕೌಂಟ್​ಗಗಳನ್ನು ಪತ್ತೆ ಹಚ್ಚಿದೆ.

ಜನರ ಬ್ಯಾಂಕ್ ಖಾತೆ, ಎಟಿಎಂ ಕಾರ್ಡ್ ಹಾಗೂ ಖಾತೆ ವಿವರಗಳನ್ನು ಹಣಕ್ಕಾಗಿ ಸಂಗ್ರಹಿಸಿ ಸೈಬರ್ ವಂಚಕರಿಗೆ ನೀಡಲಾಗುತ್ತಿತ್ತು ಎಂಬುದು ಸಿಐಡಿ ತನಿಖೆ ವೇಳೆ ಬಯಲಾಗಿದ್ದು, ರಾಜ್ಯದಲ್ಲಿ ರಾಜ್ಯಾದ್ಯಂತ 100ಕ್ಕೂ ಹೆಚ್ಚು ಕಡೆ ಏಕಕಾಲದಲ್ಲಿ ದಾಳಿ ನಡೆಸಿದ ಸಿಐಡಿ ತಂಡ ಇಂದು(ಫೆ.6) ಈ ಪ್ರಕರಣದ ಪ್ರಮುಖ 13 ಮಂದಿ ಆರೋಪಿಗಳನ್ನು ವಶಕ್ಕೆ ಪಡೆದುಕೊಂಡಿದೆ. ದೆ. ಈ ಮ್ಯೂಲ್ ಅಕೌಂಟ್‌ಗಳ ಮೂಲಕ ಆನ್‌ಲೈನ್ ವಂಚನೆ ನಡೆಸಿ ಹಣ ವರ್ಗಾವಣೆ ಹಾಗೂ ಎಟಿಎಂ ಮೂಲಕ ಹಣ ವಿತ್‌ಡ್ರಾ ಮಾಡಲಾಗುತ್ತಿತ್ತು ಎನ್ನಲಾಗಿದೆ.

ತನಿಖೆಯ ವೇಳೆ ಸುಮಾರು 42 ಸಾವಿರಕ್ಕೂ ಹೆಚ್ಚು ಮ್ಯೂಲ್ ಅಕೌಂಟ್‌ಗಳು ಬಳಕೆಯಲ್ಲಿರುವುದು ಪತ್ತೆಯಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಹೆಚ್ಚಿನ ತನಿಖೆ ಮುಂದುವರಿದಿದೆ.

error: Content is protected !!