ಇಂದು ಉಪಮುಖ್ಯಮಂತ್ರಿ, ಉನ್ನತ ಶಿಕ್ಷಣ ಸಚಿವರ ಜಿಲ್ಲಾ ಪ್ರವಾಸ

ಮಂಗಳೂರು: ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಹಾಗೂ ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್ ಅವರು ಇಂದು(ಫೆ.6) ದಕ್ಷಿಣ ಕನ್ನಡ ಜಿಲ್ಲೆಗೆ ಆಗಮಿಸಲಿದ್ದಾರೆ.


ಡಿ.ಕೆ.ಶಿ ಅವರು ಇಂದು ಮಧ್ಯಾಹ್ನ 1:40ಕ್ಕೆ ಮಂಗಳೂರು ವಿಮಾನ ನಿಲ್ದಾಣ ಆಗಮಿಸಲಿದ್ದು, 3:30ಕ್ಕೆ ಪುತ್ತೂರು ತಾಲೂಕಿನ ಕಾಂಚನ ಬಜತ್ತೂರು ಶ್ರೀ ಲಕ್ಷ್ಮಿ ನಾರಾಯಣ ಸಂಗೀತ ಕಲಾ ಶಾಲೆ ವತಿಯಿಂದ ಆಯೋಜಿಸಿರುವ ನೂತನ ಸಂಗೀತ ಕಲಾ ಶಾಲೆ, ಸಭಾಭವನ ಹಾಗೂ ಭೋಜನ ಶಾಲೆಯ ಲೋಕಾರ್ಪಣೆ ಹಾಗೂ 72ನೇ ವರ್ಷದ ಕಾಂಚನೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ಹಾಗೆಯೇ ಸಂಜೆ 6ಕ್ಕೆ ಪುತ್ತೂರು ಕಾಂಗ್ರೆಸ್ ಭವನದ ಶಿಲಾನ್ಯಾಸ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಫೆಬ್ರವರಿ 7 ರಂದು ಬೆಳಿಗ್ಗೆ 9:40ಕ್ಕೆ ಉಪಮುಖ್ಯಮಂತ್ರಿಗಳು ಮಂಗಳೂರಿನಿಂದ ಬೆಂಗಳೂರಿಗೆ ತೆರಳಲಿದ್ದಾರೆ.

ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್ ಅವರು ಇಂದು(ಫೆ.6) ಬೆಳಿಗ್ಗೆ 7:55ಕ್ಕೆ ಮಂಗಳೂರು ವಿಮಾನ ನಿಲ್ದಾಣ ಆಗಮಿಸಲಿದ್ದಾರೆ. 10:30ಕ್ಕೆ ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿ ಕಾಲೇಜಿನ ಇಂದ್ರಪ್ರಸ್ಥ ಆಡಿಟೋರಿಯಂನಲ್ಲಿ ಪದವಿ ಪ್ರಧಾನ ಸಮಾರಂಭದಲ್ಲಿ ಪಾಲ್ಗೊಳ್ಳಲಿದ್ದು, 12:10ಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳ ಹಾಗೂ 5:30ಕ್ಕೆ ನಗರದ ಫಾದರ್ ಮುಲ್ಲರ್ ಕಾನ್ವೆಂಷನ್ ಸೆಂಟರ್‍ನಲ್ಲಿ ಇಂಡಿಯನ್ ಡೆಂಟಲ್ ಕಾನ್ಫರೆನ್ಸ್ ಉದ್ಘಾಟನಾ ಕಾರ್ಯಕ್ರಮಕ್ಕೆ ಭೇಟಿ ನೀಡಲಿದ್ದಾರೆ. ಫೆಬ್ರವರಿ 7 ರಂದು ಬೆಳಿಗ್ಗೆ 6.5ಕ್ಕೆ ಉನ್ನತ ಶಿಕ್ಷಣ ಸಚಿವರು ಮಂಗಳೂರಿನಿಂದ ಬೆಂಗಳೂರಿಗೆ ತೆರಳಲಿದ್ದಾರೆ.

error: Content is protected !!