
ಮಂಗಳೂರು: ಗ್ರಾಮೀಣ ಪ್ರದೇಶದಲ್ಲಿ ನೈರ್ಮಲ್ಯ ಸುಸ್ಥಿರತೆಯನ್ನು ಕಾಯ್ದುಕೊಳ್ಳುವ ಉದ್ದೇಶದೊಂದಿಗೆ ಎಲ್ಲಾ ಗ್ರಾಮಗಳಲ್ಲಿ ಕಸ ಸಂಗ್ರಹಣೆ, ಮೂಲದಲ್ಲಿಯೇ ಕಸ ವಿಂಗಡಣೆ, ವಿಲೇವಾರಿ ಮತ್ತು ಸ್ವಚ್ಛತಾ ಶ್ರಮದಾನ ಚಟುವಟಿಕೆಗಳನ್ನು ಹಮ್ಮಿಕೊಳ್ಳುವ ಮೂಲಕ ಮಾಹೆಯ ಮೊದಲ ವಾರವನ್ನು ಸ್ವಚ್ಛತೆ ಕೈಗೊಳ್ಳುವ ಉದ್ದೇಶದೊಂದಿಗೆ “ಸ್ವಚ್ಛ ಶನಿವಾರ” ವನ್ನಾಗಿ ಆಚರಿಸಲು ಸೂಚಿಸಲಾಗಿತ್ತು.

ಆದರೆ ಕೆಲವೊಂದು ತಾಲೂಕು ಪಂಚಾಯತ್ ಸೇರಿದಂತೆ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಸ್ವಚ್ಛ ಶನಿವಾರ ಆಚರಿಸದಿರುವುದು ಗಮನಕ್ಕೆ ಬಂದಿದ್ದು, ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯಿತಿಯ ಸಿಬ್ಬಂದಿಗಳು ಗ್ರಾಮಸ್ಥರಿಗೆ ಮಾಹಿತಿ, ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮದಡಿ ವಾರದ ಪ್ರತೀ ಮೊದಲ ಶನಿವಾರವನ್ನು “ಸ್ವಚ್ಛ ಶನಿವಾರ”ವನ್ನಾಗಿ ಆಚರಿಸಿ, ಕಾರ್ಯಕ್ರಮದ ಜಿ.ಪಿ.ಎಸ್ ಛಾಯಾಚಿತ್ರವನ್ನು ಗ್ರಾಮ ಪಂಚಾಯತ್‍ನ ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಳ್ಳಬೇಕು ಎಂದು ಜಿ.ಪಂ. ಮುಖ್ಯ ಕಾರ್ಯನಿರ್ವಾಹಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.