ರೈಲ್ವೇ ಹಳಿಯಲ್ಲಿ ಮೃತದೇಹ ಪತ್ತೆ; ಸಂಶಯಾಸ್ಪದ ಸಾ*ವು

ಮಂಗಳೂರು: ಪಚ್ಚನಾಡಿ ರೈಲ್ವೇ ಹಳಿಯಲ್ಲಿ ಯುವಕನ ಮೃತದೇಹ ಪತ್ತೆಯಾಗಿದ್ದು, ಸಾವಿನ ಕುರಿತು ಅನುಮಾನಗಳು ವ್ಯಕ್ತವಾಗುತ್ತಿದೆ.

ಪಚ್ಚನಾಡಿ ಬಂದಲೆ ನಿವಾಸಿ ಬಬಿತ್ ಮೃತ ಯುವಕ.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಸ್ಥಳದಲ್ಲಿ ಬ್ಯಾಗ್ ಸೇರಿದಂತೆ ಮೃತನಿಗೆ ಸೇರಿದ್ದ ಇತರ ವಸ್ತುಗಳು ಪತ್ತೆಯಾಗಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಹೆಚ್ಚಿನ ಮಾಹಿತಿ ಕಲೆಹಾಕಲಾಗುತ್ತಿದೆ.

ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದ್ದು, ಸಾವಿನ ನಿಖರ ಕಾರಣ ತನಿಖೆಯ ನಂತರವೇ ತಿಳಿದುಬರಲಿದೆ. ಪ್ರಕರಣಕ್ಕೆ ಸಂಬಂಧಿಸಿ ಸಂಬಂಧಿತ ಠಾಣಾ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

error: Content is protected !!