ತಲೆಮರೆಸಿಕೊಂಡಿದ್ದ ವಂಚನೆ ಆರೋಪಿ ಸೆರೆ

ಮಂಗಳೂರು: ವಂಚನೆ ಪ್ರಕರಣವೊಂದರಲ್ಲಿ ಭಾಗಿಯಾಗಿ ಕಳೆದ 13 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಉಳ್ಳಾಲ ಪೊಲೀಸರು ಬೆಂಗಳೂರಿನಲ್ಲಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಬಂಧಿತ ಆರೋಪಿಯನ್ನು ಲಕ್ಷ್ಮೀಶಬಾಬು (48) ಎಂದು ಗುರುತಿಸಲಾಗಿದೆ. ಈತ 2011ರಲ್ಲಿ ದಾಖಲಾಗಿದ್ದ ಪ್ರಕರಣವೊಂದರಲ್ಲಿ ಜಾಮೀನು ಪಡೆದ ಬಳಿಕ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ದೀರ್ಘಕಾಲದಿಂದ ತಲೆಮರೆಸಿಕೊಂಡಿದ್ದನು.

ಉಳ್ಳಾಲ ಪೊಲೀಸ್ ಠಾಣೆಯಲ್ಲಿ 2011 ರಲ್ಲಿ ಅಪರಾಧ ಸಂಖ್ಯೆ 183/2011, ಕಲಂ 405 (ನಂಬಿಕೆ ದ್ರೋಹ), 406, 420 (ವಂಚನೆ) ಮತ್ತು 120(ಬಿ) (ಅಪರಾಧ ಸಂಚು) ಐಪಿಸಿ ಅಡಿಯಲ್ಲಿ ಈತನ ವಿರುದ್ಧ ಪ್ರಕರಣ ದಾಖಲಾಗಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾನ್ಯ 7ನೇ ಜೆ.ಎಂ.ಎಫ್.ಸಿ ನ್ಯಾಯಾಲಯದಲ್ಲಿ ವಿಚಾರಣೆ ನಡೆಯುತ್ತಿದೆ.

ಖಚಿತ ಮಾಹಿತಿ ಮೇರೆಗೆ ಉಳ್ಳಾಲ ಪೊಲೀಸರು ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬೆಂಗಳೂರಿನಲ್ಲಿ ದಸ್ತಗಿರಿ ಮಾಡಿದ್ದು, ಮಂಗಳೂರಿನ ಮಾನ್ಯ 7ನೇ ಜೆ.ಎಂ.ಎಫ್.ಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

error: Content is protected !!