ಸುರತ್ಕಲ್: ಬೈಕೊಂದರಲ್ಲಿ ತ್ರಿಬಲ್ ರೈಡ್ ಹೋಗುತ್ತಿದ್ದ ಯುವಕರು ಏಕಾಏಕಿ ರಾಷ್ಟ್ರೀಯ ಹೆದ್ದಾರಿಗೆ ನುಗ್ಗಿದ ಪರಿಣಾಮ ಹೆದ್ದಾರಿಯಲ್ಲಿ ವೇಗವಾಗಿ ಚಲಿಸುತ್ತಿದ್ದ ಕಾರಿಗೆ ಡಿಕ್ಕಿ ಹೊಡೆದಿರುವ ಘಟನೆ ಮಂಗಳೂರು ಹೊರವಲಯದ ಸುರತ್ಕಲ್ ಬಳಿಯ ಸೂರಜ್ ಹೊಟೇಲ್ ಬಳಿ ನಡೆದಿದೆ.

ಯುವಕರು ಹೆಲ್ಮೆಟ್ ಕೂಡ ಧರಿಸದೇ ನಿರ್ಲಕ್ಷ್ಯದಿಂದ ಬೈಕ್ನಲ್ಲಿ ತ್ರಿಬಲ್ ರೈಡ್ ಮಾಡುತ್ತಿದ್ದರು. ಈ ವೇಳೆ ಕಾರು ಡಿಕ್ಕಿ ಹೊಡೆದ ರಭಸಕ್ಕೆ ಬೈಕ್ ಸವಾರರು ಹಾರಿ ರಸ್ತೆಗೆ ಬಿದ್ದಿದ್ದಾರೆ. ಕಾರು ಡಿಕ್ಕಿಯ ರಭಸಕ್ಕೆ ಓರ್ವ ಅಪಾಯದಿಂದ ಪಾರಾಗಿದ್ದು, ಉಳಿದ ಇಬ್ಬರ ಸ್ಥಿತಿ ಗಂಭೀರವಾಗಿದೆ.

ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ.