ನವದೆಹಲಿ: ಪ್ರಧಾನಿ ನರೇಂದ್ರ ಮೋದಿಯವರು ಇಂದಿನಿಂದ(ಫೆ.7) ಮಲೇಷ್ಯಾಗೆ 2 ದಿನಗಳ ಪ್ರವಾಸ ಕೈಗೊಳ್ಳುತ್ತಿದ್ದಾರೆ.

ಮಲೇಷ್ಯಾದ ಪ್ರಧಾನಿ ಅನ್ವರ್ ಇಬ್ರಾಹಿಂ ಅವರ ಆಹ್ವಾನದ ಮೇರೆಗೆ ಮೋದಿ ಅವರು ಕೌಲಾಲಂಪುರಕ್ಕೆ ಪ್ರಯಾಣಿಸಲಿದ್ದಾರೆ ಎಂದು ವಿದೇಶಾಂಗ ಸಚಿವಾಲಯ ತಿಳಿಸಿದೆ.

ಫೆ.7-8ರವರೆಗೆ ನಡೆಯಲಿರುವ ಈ ಪ್ರವಾಸದ ವೇಳೆ ಅನ್ವರ್ ಇಬ್ರಾಹಿಂ ಜತೆಗೆ ದ್ವಿಪಕ್ಷೀಯ ಮಾತುಕತೆ ನಡೆಸಲಿದ್ದು, ವ್ಯಾಪಾರ, ಹೂಡಿಕೆ, ಇಂಧನ ಮತ್ತು ಕಡಲ ಭದ್ರತೆಯ ಕ್ಷೇತ್ರಗಳಲ್ಲಿ ದ್ವಿಪಕ್ಷೀಯ ಸಂಬಂಧಗಳನ್ನು ಬಲಪಡಿಸುವ ಕುರಿತು ಉಭಯ ನಾಯಕರ ನಡುವೆ ಚರ್ಚೆ ನಡೆಯುವ ನಿರೀಕ್ಷೆಯಿದೆ. ಈ ವೇಳೆ ಮೋದಿ ಅವರನ್ನು ಸ್ವಾಗತಿಸಲು ಮಲೇಷ್ಯಾದಲ್ಲಿರುವ 750ಕ್ಕೂ ಹೆಚ್ಚು ಭಾರತೀಯ ಅನಿವಾಸಿಗಳು ಬೃಹತ್ ನೃತ್ಯ ಪ್ರದರ್ಶನ ನೀಡಲಿದ್ದು, ಮಲೇಷ್ಯನ್ ಬುಕ್ ಆಫ್ ರೆಕಾರ್ಡ್ ಆಗುವ ಸಾಧ್ಯತೆಯಿದೆ.
