
ನವದೆಹಲಿ: ತೆರೆದ ಗುಂಡಿಗೆ ಬೈಕ್ ಸವಾರ ಬಿದ್ದು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಪೊಲೀಸರು ಉಪ ಗುತ್ತಿಗೆದಾರ ರಾಜೇಶ್ ಪ್ರಜಾಪತಿ ಅವರನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ಪೊಲೀಸರ ಪ್ರಕಾರ, ಅದೇ ರಸ್ತೆಯಲ್ಲಿ ಪ್ರಯಾಣಿಸುತ್ತಿದ್ದ ಕುಟುಂಬವೊಂದು ಈ ಅಘಾತಕಾರಿ ದೃಶ್ಯವನ್ನು ವೀಕ್ಷಿಸಿತ್ತು. 25 ವರ್ಷದ ಯುವಕ ಕಮಲ್ ರೋಹಿಣಿಯಲ್ಲಿರುವ ತನ್ನ ಕಚೇರಿಯಿಂದ ಹೊರಟಿದ್ದರು ಆದರೆ ಮನೆಗೆ ತಲುಪಿರಲಿಲ್ಲ. ಭಾರೀ ಹುಡುಕಾಡಿದರೂ ಸುಳಿವು ಕೂಡ ಸಿಕ್ಕಿರಲಿಲ್ಲ. ಮರುದಿನ ಬೆಳಗ್ಗೆ 8 ಗಂಟೆ ಸುಮಾರಿಗೆ ಮಹಿಳೆಯೊಬ್ಬರು ಪೊಲೀಸರಿಗೆ ಕರೆ ಮಾಡಿ ಆಘಾತಕಾರಿ ದೃಶ್ಯ ಕಂಡಿರುವುದನ್ನು ವರದಿ ಮಾಡಿದ್ದರು.

ಪೊಲೀಸರು ಜನಕಪುರಿ ಪೊಲೀಸ್ ಠಾಣೆಯಲ್ಲಿ ಗುತ್ತಿಗೆದಾರ ಮತ್ತು ದೆಹಲಿ ಜಲ ಮಂಡಳಿಯ ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ಹತ್ಯೆ ಆರೋಪದ ಮೇಲೆ ಎಫ್‌ಐಆರ್ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.

ಸದ್ಯ ರಾಜೇಶ್ ಪ್ರಜಾಪತಿ ಪ್ರಸ್ತುತ ದೆಹಲಿ ಪೊಲೀಸರ ವಶದಲ್ಲಿದ್ದು, ಅವರನ್ನು ವಿಚಾರಣೆ ನಡೆಸಲಾಗುತ್ತಿದೆ. ಕರೆ ದಾಖಲೆಗಳು, ಸಿಸಿಟಿವಿ ದೃಶ್ಯಾವಳಿಗಳು ಮತ್ತು ಸ್ಥಳ ದಾಖಲೆಗಳನ್ನು ಪರಿಶೀಲಿಸುತ್ತಿದ್ದೇವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.