
ಬೆಂಗಳೂರು: ರಾಯಚೂರಿನಿಂದ ಬೆಂಗಳೂರಿಗೆ ಹೊರಟಿದ್ದ ಗ್ರೀನ್ ಲೈನ್ ಖಾಸಗಿ ಬಸ್ ಹಾಗೂ ಕಾರು ಮುಖಾಮುಖಿ ಡಿಕ್ಕಿಯಾದ ಘಟನೆ ಆಂಧ್ರದ ಕರ್ನೂಲ್ ಜಿಲ್ಲೆಯ ಆಲೂರು ಬಳಿ ನಡೆದಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.

ಡಿಕ್ಕಿ ರಭಸಕ್ಕೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದ್ದು, ಬೆಂಕಿ ಕೂಡ ಹೊತ್ತಿಕೊಂಡಿದೆ. ಈ ವೇಳೆ ಬಸ್‌ನ ಪ್ರಯಾಣಿಕರು ಬೆಂಕಿ ಹಾರಿಸಿ ಗಾಯಗೊಂಡ ಕಾರು ಚಾಲಕನನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ.
ಕಾರು ಚಾಲಕನ ಅತಿವೇಗದ ಚಾಲನೆಯೇ ಅಪಘಾತಕ್ಕೆ ಕಾರಣ ಎಂದು ಹೇಳಲಾಗಿದೆ. ಆಲೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.