ಕಾರಿನಲ್ಲಿ ಡ್ರಗ್ಸ್ ಸಾಗಿಸುತ್ತಿದ್ದ ಐವರ ಬಂಧನ; 2 ಲಕ್ಷ ರೂ.ಗೂ ಅಧಿಕ ಮೌಲ್ಯದ ಡ್ರಗ್ಸ್ ವಶ

ಹಾಸನ: ನಗರದ ಚೆಕ್‌ಪೋಸ್ಟ್‌ ಬಳಿ ಕಾರಿನಲ್ಲಿ ಸುಮಾರು 40 ಗ್ರಾಂ ಎಂಡಿಎಂಎ ಪತ್ತೆಯಾಗಿದ್ದು, ಐವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಹಾಗೆಯೇ 2 ಲಕ್ಷಕ್ಕೂ ಅಧಿಕ ಮೌಲ್ಯದ ಎಂಡಿಎಂಎ ಯನ್ನು ವಶಕ್ಕೆ ಪಡೆದುಕೊಂಡಿದ್ದಾರೆ ಎನ್ನಲಾಗಿದೆ.

ಶಿವಮೊಗ್ಗ ಮೂಲದ ಫರ್ವೀಜ್ (29), ಸುಹೇಲ್ (24), ಅಬ್ದುಲ್ ಯಾಸಿನ್ (20), ಇಬ್ರತ್ ಖಾನ್ (24) ಹಾಗೂ ಹಾಸನದ ಸೈಯದ್ ಯೂಸಫ್ (23) ಬಂಧಿತ ಆರೋಪಿಗಳು.

ಖಚಿತ ಮಾಹಿತಿಯ ಮೇರೆಗೆ ಹಾಸನದ ರಾಜ್‌ಕುಮಾರ್ ನಗರ ಬಳಿಯ ಚೆಕ್‌ಪೋಸ್ಟ್‌ನಲ್ಲಿ ಸಂಚರಿಸುತ್ತಿದ್ದ ಎರ್ಟಿಗಾ ಕಾರನ್ನು ತಪಾಸಣೆ ನಡೆಸಿದ ವೇಳೆ ಆರೋಪಿಗಳು ಸಿಕ್ಕಿಬಿದ್ದಿದ್ದಾರೆ. ನಾಲ್ವರು ಶಿವಮೊಗ್ಗ ಜಿಲ್ಲೆಯವರಾಗಿದ್ದು, ಒಬ್ಬ ಹಾಸನ ನಿವಾಸಿ ಎಂದು ಪೊಲೀಸರು ತಿಳಿಸಿದ್ದಾರೆ. 40 ಗ್ರಾಂ ಎಂಡಿಎಂಎ ಹಾಗೂ ಆರೋಪಿಗಳು ಬಳಸುತ್ತಿದ್ದ ಕಾರನ್ನು ವಶಕ್ಕೆ ಪಡೆಯಲಾಗಿದೆ.

ಪೆನ್‌ಷನ್ ಮೊಹಲ್ಲಾ ಠಾಣೆಯ ಸಿಪಿಐ ಸ್ವಾಮಿನಾಥ್ ನೇತೃತ್ವದಲ್ಲಿ ಪಿಎಸ್‌ಐ ರವಿಶಂಕರ್ ಹಾಗೂ ಸಿಬ್ಬಂದಿ ಪ್ರಸನ್ನಕುಮಾರ್, ದಿಲೀಪ್, ಪುನೀತ್, ಲೋಕೇಶ್, ಹನುಮೇಶ್ ಸೇರಿದಂತೆ ಇತರರು ಕಾರ್ಯಾಚರಣೆ ನಡೆಸಿದ್ದು, ಪ್ರಕರಣವನ್ನು ಪೆನ್‌ಷನ್ ಮೊಹಲ್ಲಾ ಪೊಲೀಸ್ ಠಾಣೆಯಲ್ಲಿ ದಾಖಲಿಸಿ ಮುಂದಿನ ತನಿಖೆ ಕೈಗೊಳ್ಳಲಾಗಿದೆ.

error: Content is protected !!