ಮೇ 30: 11 ನೇ ವರ್ಷದ ಪಟ್ಲ ಸಂಭ್ರಮ

ಮಂಗಳೂರು: ಮೇ 30 ರಂದು 11 ನೇ ವರ್ಷದ “ಪಟ್ಲ ಸಂಭ್ರಮ” ಕಾರ್ಯಕ್ರಮ‌ ನಡೆಯಲಿದ್ದು, ಕಾರ್ಯಕ್ರಮದ ಕುರಿತು ರೂಪುರೇಷೆಗಳನ್ನು ಸಿದ್ದಪಡಿಸಿ, ಎಲ್ಲಾ ಘಟಕಗಳಿಗೂ ಜವಾಬ್ದಾರಿ ನೀಡಲಾಗುವುದು ಎಂದು ಪಟ್ಲ ಸತೀಶ್ ಶೆಟ್ಟಿ ತಿಳಿಸಿದರು.

ಕಲಾವಿದರಿಗೆ ಪಟ್ಲ ಯಕ್ಷಾಶ್ರಯ ಯೋಜನೆಯಡಿಯಲ್ಲಿ 15 ಲಕ್ಷ ರೂಪಾಯಿಗಳನ್ನು ವಿತರಿಸಲಾಯಿತು. ಪೂರ್ವಭಾವಿ ಸಭೆಗೆ ಪ್ರಾದೇಶಿಕ ಘಟಕಗಳ 350ಕ್ಕೂ ಹೆಚ್ಚು ಮಂದಿ ಪಾಲ್ಗೊಂಡಿರುವುದು ಬಹಳ ವಿಶೇಷವಾಗಿತ್ತು.

ಸಭೆಯಲ್ಲಿ ಟ್ರಸ್ಟ್ ನ ಕೋಶಾಧಿಕಾರಿ ಸಿಎ ಸುದೇಶ್ ಕುಮಾರ್ ರೈ, ಸಂಘಟನಾ ಕಾರ್ಯದರ್ಶಿ ಪ್ರದೀಪ್ ಆಳ್ವ ಕದ್ರಿ, ಬಾಳ ಜಗನ್ನಾಥ ಶೆಟ್ಟಿ, ಜೊತೆ ಕಾರ್ಯದರ್ಶಿ ರವಿಚಂದ್ರ ಶೆಟ್ಟಿ, ಉದಯಕುಮಾರ್ ಶೆಟ್ಟಿ ಉಪಸ್ಥಿತರಿದ್ದರು. ಸರಪಾಡಿ ಅಶೋಕ ಶೆಟ್ಟಿ, ಪ್ರಭಾಕರ ಜೋಷಿ, ಭುಜಬಲಿ ಮೊದಲಾದವರು ಅನಿಸಿಕೆಗಳನ್ನು ವ್ಯಕ್ತಪಡಿಸಿದರು.

error: Content is protected !!