ಮಂಗಳೂರು: ಬೊಂದೇಲ್‌ನ ಸೆಂಟ್ ಲಾರೆನ್ಸ್ ಇಂಗ್ಲಿಷ್ ಮೀಡಿಯಂ ಶಾಲೆಯ ವಿದ್ಯಾರ್ಥಿ ಶ್ರೇಯಸ್ ಕುಮಾರ್ ಕೆ. ರಾಜ್ಯ ಮಟ್ಟದ ವಿಶೇಷ ಮಕ್ಕಳ ಅಥ್ಲೆಟಿಕ್ ಸ್ಪರ್ಧೆಯಲ್ಲಿ ಸಾಧನೆ ಮಾಡಿ ಶಾಲೆ ಹಾಗೂ ಕುಟುಂಬಕ್ಕೆ ಹೆಮ್ಮೆ ತಂದಿದ್ದಾರೆ.




ಬೆಂಗಳೂರಿನ ರಾಮನಗರದಲ್ಲಿ ನಡೆದ ಈ ಸ್ಪರ್ಧೆಯಲ್ಲಿ ಶ್ರೇಯಸ್ ಶಾಟ್‌ಫುಟ್ ಮತ್ತು ಜಾವೆಲಿನ್ ಎಸೆತ ಸ್ಪರ್ಧೆಗಳಲ್ಲಿ ಭಾಗವಹಿಸಿ, ಶಾಟ್‌ಫುಟ್‌ನಲ್ಲಿ ಪ್ರಥಮ ಸ್ಥಾನ ಪಡೆದು ರಾಷ್ಟ್ರೀಯ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.
ಶ್ರೇಯಸ್ ಅವರು ಪ್ರವೀಣ್ ಕುಮಾರ್ ಹಾಗೂ ಕವಿತಾ ಜೆ.ಕೆ. ಅವರ ಪುತ್ರ. ಅವರ ತಂಗಿ ರಿಷಿಕಾ ಪಿ, ಯುಕೆಜಿ ತರಗತಿಯಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದಾರೆ.
ಶಾಲೆಯ ಆಡಳಿತ ಮಂಡಳಿ, ಶಿಕ್ಷಕರು ಮತ್ತು ಹಿತೈಷಿಗಳು ಶ್ರೇಯಸ್ ಅವರ ಈ ಸಾಧನೆಗೆ ಅಭಿನಂದನೆ ಸಲ್ಲಿಸಿ, ರಾಷ್ಟ್ರೀಯ ಮಟ್ಟದ ಸ್ಪರ್ಧೆಯಲ್ಲಿ ಹೆಚ್ಚಿನ ಯಶಸ್ಸು ಸಾಧಿಸಲಿ ಎಂದು ಹಾರೈಸಿದ್ದಾರೆ.

