ಭುವನೇಶ್ವರ: ಕಚ್ಚಾ ಬಾಂಬ್ ತಯಾರಿಕೆ ವೇಳೆ ಆಕಸ್ಮಿಕ ಸ್ಫೋಟಗೊಂಡ ಪರಿಣಾಮ ರೌಡಿ ಶೀಟರ್ ಶಹನವಾಜ್ ಮಲಿಕ್ (26) ಹಾಗೂ ಲಿಜಾತುನ್ ಬೀಬಿ ಎಂಬವರು ಸಾವನ್ನಪ್ಪಿ ಉಳಿದ ನಾಲ್ವರು ಗಂಭೀರ ಗಾಯಗೊಂಡ ಘಟನೆ ಒಡಿಶಾದ ರಾಜಧಾನಿ ಭುವನೇಶ್ವರದಲ್ಲಿರುವ ಸುಂದರಪಾದ ಪ್ರದೇಶದ ಅಜಾದ್ ನಗರದ ಮನೆಯೊಂದರಲ್ಲಿ ಸಂಭವಿಸಿದೆ. ಕಚ್ಚಾ ಬಾಂಬ್‌ಗಳನ್ನು ಜೋಡಿಸುತ್ತಿದ್ದ ವೇಳೆ ಮನೆಯೊಳಗೆ ಸ್ಫೋಟ ಸಂಭವಿಸಿದೆ. ತನಿಖೆಯ ಜವಾಬ್ದಾರಿಯನ್ನು ಎನ್‌ಐಎ ವಹಿಸಿಕೊಂಡಿದೆ.

ಮನೆಲ್ಲಿದ್ದ ರೌಡಿ ಶೀಟರ್ ಶಹನವಾಜ್ ಮಲಿಕ್ ಸೇರಿದಂತೆ ಆತನ 4 ಕುಟುಂಬಸ್ಥರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಶಹನವಾಜ್ ಅವರ ತಾಯಿ ಲಿಜಾತುನ್ ಬೀಬಿ (51), ಅವರ ನಿಶ್ಚಿತಾರ್ಥದ ಪತ್ನಿ ತೃಪ್ತಿಮಯೀ ಮಹಲ್ (23) ಮತ್ತು ಸ್ನೇಹಿತ ಅಮಿಯಾ ರಂಜನ್ ಮಲ್ಲಿಕ್ (27) ಸ್ಫೋಟದಲ್ಲಿ ತೀವ್ರವಾಗಿ ಗಾಯಗೊಂಡರು. ಮೂಲಗಳ ಪ್ರಕಾರ ಜನವರಿ 27ರಂದು ಈ ಘಟನೆ ನಡೆದಿದ್ದು, ಸ್ಫೋಟದ ಸಿಸಿಟಿವಿ ದೃಶ್ಯ ಈಗ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ವೈರಲ್ ಆಗುತ್ತಿದೆ.
ತನಿಖೆ ಎನ್‌ಐಎಗೆ
ಈ ಸ್ಫೋಟ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಒಡಿಶಾ ಪೊಲೀಸರು ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ)ಗೆ ಮಾಹಿತಿ ನೀಡಿದ್ದು, ವಿಚಾರ ತಿಳಿದ ಕೂಡಲೇ ದೌಡಾಯಿಸಿದ ಎನ್ಐಎ ತಂಡವು ಸ್ಥಳೀಯ ಪೊಲೀಸರ ಸಹಯೋಗದೊಂದಿಗೆ ವೀಡಿಯೊವನ್ನು ಒಂದೊಂದಾಗಿ ಪರಿಶೀಲಿಸುತ್ತಿದೆ.
ಮಲಿಕ್ ಮೇಲೆ ಹಲವಾರು ಕ್ರಿಮಿನಲ್ ಪ್ರಕರಣಗಳು ಬಾಕಿ ಇದ್ದು, ಇತರರೊಂದಿಗೆ ಬಾಂಬ್‌ಗಳನ್ನು ತಯಾರಿಸುತ್ತಿದ್ದ.ಶಹನವಾಜ್ ಮಲಿಕ್ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಯ ಸಮಯದಲ್ಲಿ ಸಾವನ್ನಪ್ಪಿದ್ದು, ಲಿಜಾತುನ್ ಬೀಬಿ ಕೂಡ ಸುಟ್ಟ ಗಾಯಗಳಿಂದ ಸಾವನ್ನಪ್ಪಿದ್ದಾರೆ. ತೃಪ್ತಿಮಯೀ ಮತ್ತು ಅಮಿಯಾ ರಂಜನ್ ಸೇರಿ ಮೂವರು ಹೆಂಗಸರು ಆಸ್ಪತ್ರೆಯಲ್ಲಿ ಜೀವ ಉಳಿಸಿಕೊಳ್ಳಲು ಹೋರಾಡುತ್ತಿದ್ದಾರೆ ಎಂದು ಹೇಳಲಾಗಿದೆ.
ಮನೆಯಲ್ಲಿ ಕಚ್ಚಾ ಬಾಂಬ್ ತಯಾರಿಸಲು ಕಾರಣವೇನು ಅದನ್ನು ಎಲ್ಲಿಗೆ ಸರಬರಾಜು ಮಾಡುತ್ತಿದ್ದ ಎಂದು ತಿಳಿಯಲು ಪೊಲೀಸರು ಪ್ರಯತ್ನಿಸುತ್ತಿದ್ದಾರೆ. ಸಾಕ್ಷ್ಯಗಳು ಮತ್ತು ಇತರ ಮಾಹಿತಿಯನ್ನು ಸಂಗ್ರಹಿಸಲು ಘಟನಾ ಸ್ಥಳಕ್ಕೆ ವೈಜ್ಞಾನಿಕ ತಂಡವನ್ನು ಕಳುಹಿಸಲಾಗಿದೆ. ಅಕ್ರಮ ಬಾಂಬ್ ತಯಾರಿಕೆಯಲ್ಲಿ ಇತರರು ಭಾಗಿಯಾಗಿದ್ದರೆ, ಅವರ ಬಗ್ಗೆ ಮಾಹಿತಿ ಪಡೆಯಲು ಗಾಯಾಳುಗಳು ಚೇತರಿಸಿಕೊಂಡ ನಂತರ ಅವರನ್ನು ವಿಚಾರಣೆ ಮಾಡಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.