ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಂದ ಶಾಸಕ ಮಂಜುನಾಥ ಭಂಡಾರಿ ಅರೋಗ್ಯ ವಿಚಾರಣೆ

ಮಂಗಳೂರು: ಅನಾರೋಗ್ಯ ಹಿನ್ನೆಲೆಯಲ್ಲಿ ಬೆಂಗಳೂರಿನ ನಾರಾಯಣ ಹೃದಯಾಲಯದಲ್ಲಿ ಚಿಕಿತ್ಸೆ ಪಡೆದು ಗುಣಮುಖರಾಗುತ್ತಿರುವ ವಿಧಾನ ಪರಿಷತ್ ಶಾಸಕರು ಹಾಗೂ ಕೆಪಿಸಿಸಿ ಕಾರ್ಯಾಧ್ಯಕ್ಷರು ಆಗಿರುವ ಮಂಜುನಾಥ ಭಂಡಾರಿ ಅವರನ್ನು ಇಂದು ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರು ಪತ್ನಿ ಸಮೇತ ಭೇಟಿಯಾಗಿ ಅರೋಗ್ಯ ವಿಚಾರಿಸಿದರು.

ಇದೇ ಸಂದರ್ಭದಲ್ಲಿ ಚಿಕಿತ್ಸೆ ನೀಡುತ್ತಿರುವ ಖ್ಯಾತ ವೈದ್ಯರಾದ ದೇವಿಪ್ರಸಾದ್ ಶೆಟ್ಟಿ ಅವರ ಬಳಿ ಸಮಾಲೋಚನೆ ನಡೆಸಿದ ಖರ್ಗೆ ಅವರು ಭಂಡಾರಿ ಅವರನ್ನು ಶೀಘ್ರ ಗುಣಮುಖರಾಗಿ ಬನ್ನಿ ಎಂದು ಶುಭ ಹಾರೈಸಿ ತೆರಳಿದರು. ಈ ಸಂದರ್ಭದಲ್ಲಿ ಮಂಜುನಾಥ ಭಂಡಾರಿ ಅವರ ಕುಟುಂಬ ಸದಸ್ಯರು ಉಪಸ್ಥಿತರಿದ್ದರು.

 

error: Content is protected !!