ಮನೆಯಂಗಳದಲ್ಲೇ ನಿಂತಿದ್ದ ಸ್ಕೂಟರ್‌ಗೆ ಏಕಾಏಕಿ ಬೆಂಕಿ ತಗುಲಿ ಕ್ಷಣಾರ್ಧದಲ್ಲಿ ಸುಟ್ಟು ಕರಕಲು!!

ಶಿರ್ವ: ಮನೆಯಂಗಳದಲ್ಲಿ ನಿಲ್ಲಿಸಿದ್ದ ಸ್ಕೂಟರ್‌ ನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡು, ಬೆಂಕಿ ಹತ್ತಿಕೊಂಡು ಸಂಪೂರ್ಣ ಸುಟ್ಟು ಕರಕಲಾಗಿರುವ ಘಟನೆ ಶಿರ್ವ ಸಮೀಪದ ಪಂಜಿಮಾರು ಪಾಲಮೆಯಲ್ಲಿ ಮಂಗಳವಾರ(ಫೆ.17) ಮಧ್ಯಾಹ್ನ ಸಂಭವಿಸಿದೆ.

ಪಾಲಮೆಯ ನಿವಾಸಿಯೊಬ್ಬರು ಕೇವಲ ಒಂದು ತಿಂಗಳ ಹಿಂದೆಯಷ್ಟೇ ಮಂಗಳೂರಿನಲ್ಲಿ ಹೊಸ ಹೋಂಡಾ ಡಿಯೋ(Dio) ಸ್ಕೂಟರ್ ಖರೀದಿಸಿದ್ದರು. ಮಂಗಳವಾರ ಮಧ್ಯಾಹ್ನ ಸ್ಕೂಟರ್ ಅನ್ನು ಮನೆಯ ಅಂಗಳದಲ್ಲಿ ನಿಲ್ಲಿಸಿದ್ದಾಗ, ಏಕಾಏಕಿ ಬೆಂಕಿ ಕಾಣಿಸಿಕೊಂಡಿದೆ. ಕ್ಷಣಾರ್ಧದಲ್ಲಿ ಬೆಂಕಿ ವ್ಯಾಪಿಸಿದ್ದು, ಸ್ಕೂಟರ್ ಪೂರ್ತಿಯಾಗಿ ಸುಟ್ಟು ಭಸ್ಮವಾಗಿದೆ.

ಶಿರ್ವ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

error: Content is protected !!