ಮಂಗಳೂರು: ಕರ್ನಾಟಕ ಚಲನ ಚಿತ್ರ ವಾಣಿಜ್ಯ ಮಂಡಳಿಯ ಅಧ್ಯೆಕ್ಷೆ ಜಯಮಾಲ ಅವರು ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರನ್ನು ಭೇಟಿ ಮಾಡಿದರು.ಚಲನ ಚಿತ್ರರಂಗಕ್ಕೆ ಸಂಬಂಧಿಸಿದ ವಿಚಾರಗಳನ್ನು ಉಪಮುಖ್ಯಮಂತ್ರಿಯವರಲ್ಲಿ ಪ್ರಸ್ತಾಪಿಸಿದರು.


ಈ ಸಂದರ್ಭದಲ್ಲಿ ಸುಂದರ ರಾಜ್, ತುಳುಚಲನ ಚಿತ್ರ ನಿರ್ಮಾಪಕರ ಸಂಘದ ಅಧ್ಯಕ್ಷ ಆರ್ ಧನರಾಜ್ ಉಪಸ್ಥಿತರಿದ್ದರು.
ಇದೇ ಸಂದರ್ಭದಲ್ಲಿ ಕನಿಷ್ಠ 15 ಪ್ರಾದೇಶಿಕ ಭಾಷಾ ಸಿನಿಮಾಗಳಿಗೆ ಸಬ್ಸಿಡಿ ನೀಡಬೇಕೆಂದು ತುಳು ಚಲನಚಿತ್ರ ನಿರ್ಮಾಪಕರ ಸಂಘದ ಅಧ್ಯಕ್ಷ ಆರ್ ಧನರಾಜ್ ಮನವಿ ಮಾಡಿದರು.