
ಬೆಂಗಳೂರು: ವಿಧಾನ ಪರಿಷತ್ ಶಾಸಕರು ಹಾಗೂ ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಮಂಜುನಾಥ ಭಂಡಾರಿ ಅವರ ಆರೋಗ್ಯವನ್ನು ಉಪಮುಖ್ಯಮಂತ್ರಿಗಳು ಹಾಗೂ ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ. ಶಿವಕುಮಾರ್ ಅವರು ಇಂದು ಸದಾಶಿವನಗರದಲ್ಲಿರುವ ನಿವಾಸದಲ್ಲಿ ಭೇಟಿ ನೀಡಿ ವಿಚಾರಿಸಿದರು.

ಈ ಸಂದರ್ಭದಲ್ಲಿ ಅವರು ಮಂಜುನಾಥ ಭಂಡಾರಿ ಅವರ ಕುಟುಂಬ ಸದಸ್ಯರೊಂದಿಗೆ ಸಮಾಲೋಚನೆ ನಡೆಸಿ ಭಂಡಾರಿ ಅವರು ಶೀಘ್ರ ಗುಣಮುಖರಾಗಿ ಸಾರ್ವಜನಿಕ ಜೀವನದಲ್ಲಿ ಮತ್ತೆ ಚುರುಕಾಗಿ ಭಾಗವಹಿಸಲಿ ಎಂದು ಹಾರೈಸಿದರು.