ಚೆಂಡೆಂದು ಭಾವಿಸಿ ಕ್ರಿಕೆಟ್ ಆಡಿದ ಮಕ್ಕಳು; ಬ್ಯಾಟ್ ತಗುಲಿದ ತಕ್ಷಣ ಸ್ಫೋಟ

ಬೆಳ್ತಂಗಡಿ: ಚೆಂಡಿನಾಕಾರದ ವಸ್ತು ಸ್ಫೋಟಗೊಂಡು ಓರ್ವ ಬಾಲಕನಿಗೆ ಗಾಯವಾಗಿರುವಂತಹ ಘಟನೆ ಬೆಳ್ತಂಗಡಿ ತಾಲೂಕಿನ‌ ಬಂದಾರು ಗ್ರಾಮದಲ್ಲಿ ನಡೆದಿದೆ.

ಘಟನೆಯಲ್ಲಿ ಅಭೀಶ್​ ಎಂಬ ಬಾಲಕನಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಬೆಳ್ತಂಗಡಿ ಸರ್ಕಾರಿ ಆಸ್ಪತ್ರೆಗೆ ಚಿಕಿತ್ಸೆಗೆ ರವಾನಿಸಲಾಗಿದೆ.

ಸದ್ಯ ಬಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾನೆ. ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ 9(B), 1(b) ಸ್ಫೋಟಕಗಳ ಕಾಯ್ದೆ, 125 A BNS ಆಕ್ಟ್ ಅಡಿ ಪ್ರಕರಣ ದಾಖಲಾಗಿದೆ.

ಬಾಲಕ ಅಭೀಶ್ ಮನೆ ಅಂಗಳದಲ್ಲಿ ಆಟ ಆಡುತ್ತಿದ್ದ. ಈ ವೇಳೆ ಚೆಂಡಿನಾಕಾರದ ವಸ್ತು ಪತ್ತೆಯಾಗಿದೆ. ಬಾಲ್ ರೀತಿ ಇದ್ದ ಬಾಂಬ್​​ನಿಂದ ಮಕ್ಕಳು ಕ್ರಿಕೆಟ್ ಆಡಿದ್ದಾರೆ. ಓರ್ವ ಬಾಲಕ ಪತ್ತೆಯಾದ ಚೆಂಡಿನಾಕಾರದ ವಸ್ತುವನ್ನು ಬೌಲ್ ಮಾಡಿದ್ದು, ಅಭೀಶ್ ಬ್ಯಾಟ್​ನಿಂದ ಹೊಡೆದಾಗ ಬ್ಲಾಸ್ಟ್ ಆಗಿದೆ. ಈ ವೇಳೆ ಅಭೀಶ್​ಗೆ ಸಣ್ಣಪುಟ್ಟ ಗಾಯಗಳಾಗಿವೆ. ಕಾಡು ಹಂದಿ ಬೇಟೆ ಆಡಲು ಇಟ್ಟಿದ್ದ ಬಾಂಬ್​ ಎಂದು ಶಂಕಿಸಲಾಗಿದೆ.

error: Content is protected !!