ಎರಡು ಬೈಕ್ ಮುಖಾಮುಖಿ ಡಿಕ್ಕಿ: ಓರ್ವ ಸಾ*ವು, ಮತ್ತೋರ್ವ ಗಂಭೀರ

ಉಡುಪಿ: ಎರಡು ದ್ವಿಚಕ್ರ ವಾಹನಗಳು ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಓರ್ವ ಸವಾರ ಮೃತಪಟ್ಟಿದ್ದು, ಮತ್ತೋರ್ವ ಗಂಭೀರವಾಗಿ‌ ಗಾಯಗೊಂಡಿದ್ದಾರೆ ಎನ್ನಲಾಗಿದೆ.

ಸಾಗರ ತಾಲೂಕಿನ ನಿವಾಸಿ ಸಂದೀಪ್ ಮೃತ ಬೈಕ್‌ ಸವಾರ.

ರಸ್ತೆ ಕಾಮಗಾರಿ ನಡೆಯುತ್ತಿರುವ ಹಿನ್ನೆಲೆಯಲ್ಲಿ ಅಂಬಾಗಿಲು-ಕಲ್ಸಂಕ ರಸ್ತೆಯಲ್ಲಿ ಏಕಮುಖ ಸಂಚಾರದ ವ್ಯವಸ್ಥೆ ಮಾಡಲಾಗಿದೆ. ಕಲ್ಸಂಕ ಕಡೆಯಿಂದ ಅಂಬಾಗಿಲು ಕಡೆಗೆ ತೆರಳುತ್ತಿದ್ದ ಸಂದೀಪ್ ಹಾಗೂ ಅಂಬಾಗಿಲು ಕಡೆಯಿಂದ ಕಲ್ಸಂಕ ಕಡೆಗೆ ತೆರಳುತ್ತಿದ್ದ ದೇವೆಂದ್ರ ಶೆಣೈ ಎಂಬವರ ದ್ವಿಚಕ್ರ ವಾಹನ ಮುಖಾಮುಖಿಯಾಗಿ ಡಿಕ್ಕಿ ಹೊಡೆದಿದ್ದು, ಪರಿಣಾಮ ಇಬ್ಬರು ಸವಾರರು ಬೈಕ್ ಸಮೇತ ರಸ್ತೆಗೆ ಬಿದ್ದು ಗಂಭೀರ ಗಾಯಗೊಂಡಿದ್ದಾರೆ.

ಸಂದೀಪ್ ಅವರು ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ಕೊನೆಯುಸಿರೆಳೆದರೆ, ದೇವೇಂದ್ರ ಅವರು ಮಣಿಪಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅಪಘಾತದ ರಭಸಕ್ಕೆ ಎರಡು ಬೈಕ್ ಗಳು‌ ಜಖಂಗೊಂಡಿವೆ.

ಉಡುಪಿ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

error: Content is protected !!