ದ್ವಿತೀಯ ಪಿಯುಸಿ, ಎಸ್ಸೆಸ್ಸೆಲ್ಸಿ ಪರೀಕ್ಷೆಯ ಅಂತಿಮ ವೇಳಾಪಟ್ಟಿ ಪ್ರಕಟ!

ಬೆಂಗಳೂರು: ರಾಜ್ಯದ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಎಸ್. ಮಧು ಬಂಗಾರಪ್ಪ ಅವರು ದ್ವಿತೀಯ ಪಿಯುಸಿ ಮತ್ತು ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳ ಅಂತಿಮ ವೇಳಾಪಟ್ಟಿಯನ್ನು ಪ್ರಕಟಿಸಿದ್ದಾರೆ.

ಈ ಬಾರಿ ದ್ವಿತೀಯ ಪಿಯುಸಿ ಪರೀಕ್ಷೆಗೆ ಒಟ್ಟು 7,10,363 ವಿದ್ಯಾರ್ಥಿಗಳು ನೋಂದಣಿ ಮಾಡಿಸಿಕೊಂಡಿದ್ದಾರೆ. ಎಸ್‌ಎಸ್‌ಎಲ್‌ಸಿ ಪರೀಕ್ಷೆಗೆ 9,02,889 ವಿದ್ಯಾರ್ಥಿಗಳು ನೋಂದಣಿ ಮಾಡಿಸಿದ್ದಾರೆ ಎಂದು ತಿಳಿಸಿದ್ದಾರೆ.

ಎಸ್ಸೆಸ್ಸೆಲ್ಸಿ ಪರೀಕ್ಷೆ ವೇಳಾಪಟ್ಟಿ (ಪರೀಕ್ಷೆ 1)

ಮಾರ್ಚ್ 18 – ಪ್ರಥಮ ಭಾಷೆ
ಮಾರ್ಚ್ 23 – ವಿಜ್ಞಾನ
ಮಾರ್ಚ್ 25 – ದ್ವಿತೀಯ ಭಾಷೆ
ಮಾರ್ಚ್ 28 – ಗಣಿತ
ಮಾರ್ಚ್ 30 – ತೃತೀಯ ಭಾಷೆ
ಏಪ್ರಿಲ್ 2 – ಸಮಾಜ ವಿಜ್ಞಾನ

ಎಸ್ಸೆಸ್ಸೆಲ್ಸಿ ಪರೀಕ್ಷೆ ವೇಳಾಪಟ್ಟಿ (ಪರೀಕ್ಷೆ 2)

ಮೇ 18 – ಪ್ರಥಮ ಭಾಷೆ
ಮೇ 19 – ವಿಜ್ಞಾನ
ಮೇ 20 – ದ್ವಿತೀಯ ಭಾಷೆ
ಮೇ 21 – ಗಣಿತ
ಮೇ 22 – ತೃತೀಯ ಭಾಷೆ
ಮೇ 23 – ಸಮಾಜ ವಿಜ್ಞಾನ

ದ್ವಿತೀಯ ಪಿಯುಸಿ ಪರೀಕ್ಷೆ ವೇಳಾಪಟ್ಟಿ

ಫೆಬ್ರವರಿ 28 – ಕನ್ನಡ, ಅರೇಬಿಕ್
ಮಾರ್ಚ್ 2 – ಭೂಗೋಳಶಾಸ್ತ್ರ, ಸಂಖ್ಯಾಶಾಸ್ತ್ರ, ಮನಃಶಾಸ್ತ್ರ
ಮಾರ್ಚ್ 3 – ಇಂಗ್ಲಿಷ್
ಮಾರ್ಚ್ 4 – ತಮಿಳು, ತೆಲುಗು, ಮಲಯಾಳಂ, ಮರಾಠಿ, ಉರ್ದು, ಸಂಸ್ಕೃತ, ಫ್ರೆಂಚ್
ಮಾರ್ಚ್ 5 – ಇತಿಹಾಸ
ಮಾರ್ಚ್ 6 – ಭೌತಶಾಸ್ತ್ರ
ಮಾರ್ಚ್ 7 – ಐಚ್ಛಿಕ ಕನ್ನಡ, ವ್ಯವಹಾರ ಅಧ್ಯಯನ, ಭೂಗರ್ಭಶಾಸ್ತ್ರ
ಮಾರ್ಚ್ 9 – ರಸಾಯನಶಾಸ್ತ್ರ, ಶಿಕ್ಷಣಶಾಸ್ತ್ರ, ಮೂಲ ಗಣಿತ
ಮಾರ್ಚ್ 10 – ಅರ್ಥಶಾಸ್ತ್ರ
ಮಾರ್ಚ್ 11 – ತರ್ಕಶಾಸ್ತ್ರ, ವಿದ್ಯುನ್ಮಾನಶಾಸ್ತ್ರ, ಗೃಹ ವಿಜ್ಞಾನ
ಮಾರ್ಚ್ 12 – ಹಿಂದಿ
ಮಾರ್ಚ್ 13 – ರಾಜ್ಯಶಾಸ್ತ್ರ
ಮಾರ್ಚ್ 14 – ಲೆಕ್ಕಶಾಸ್ತ್ರ, ಗಣಿತ
ಮಾರ್ಚ್ 16 – ಸಮಾಜಶಾಸ್ತ್ರ, ಜೀವಶಾಸ್ತ್ರ, ಗಣಕ ವಿಜ್ಞಾನ
ಮಾರ್ಚ್ 17 – ಹಿಂದುಸ್ತಾನಿ ಸಂಗೀತ, ರೀಟೇಲ್, ಆಟೋಮೊಬೈಲ್, ಆರೋಗ್ಯ ರಕ್ಷಣೆ

ಈ ಬಾರಿ ರಾಜ್ಯಾದ್ಯಂತ ಬೋರ್ಡ್ ಪರೀಕ್ಷೆಗಳನ್ನು ಅತ್ಯಂತ ಸುಗಮ ಹಾಗೂ ಪಾರದರ್ಶಕವಾಗಿ ನಡೆಸಲು ಶಿಕ್ಷಣ ಇಲಾಖೆ ಸಕಲ ಸಿದ್ಧತೆಗಳನ್ನು ಮಾಡಿಕೊಂಡಿದೆ. ಪರೀಕ್ಷಾ ಸಿದ್ಧತೆಗಳ ಕುರಿತು ಪೊಲೀಸ್ ಇಲಾಖೆ, ಗುಪ್ತಚರ ಇಲಾಖೆ (Intelligence) ಸೇರಿದಂತೆ ಹಿರಿಯ ಅಧಿಕಾರಿಗಳೊಂದಿಗೆ ಉನ್ನತ ಮಟ್ಟದ ಸಭೆ ನಡೆಸಲಾಗಿದೆ. ಅಲ್ಲದೆ, ಎಲ್ಲಾ ಜಿಲ್ಲೆಗಳ ಜಿಲ್ಲಾಧಿಕಾರಿಗಳು (DC), ಬಿಇಒ (BEO) ಮತ್ತು ಡಿಡಿಪಿಐ (DDPI) ಅವರೊಂದಿಗೂ ಸುದೀರ್ಘ ಚರ್ಚೆ ನಡೆಸಲಾಗಿದ್ದು, ಕಳೆದ ಬಾರಿಗಿಂತ ಹೆಚ್ಚಿನ ಹಾಗೂ ಅಚ್ಚುಕಟ್ಟಾದ ತಯಾರಿ ಮಾಡಿಕೊಳ್ಳಲಾಗಿದೆ ಎಂದು ಸಚಿವರು ಭರವಸೆ ನೀಡಿದ್ದಾರೆ.

error: Content is protected !!