ಬೆಂಗಳೂರು: ತಮ್ಮ ಸದಾಶಿವ ನಗರದ ನಿವಾಸದಲ್ಲಿ ವಿಶ್ರಾಂತಿಯಲ್ಲಿರುವ ಕೆಪಿಸಿಸಿ ಕಾರ್ಯಾಧ್ಯಕ್ಷರು ಹಾಗೂ ವಿಧಾನ ಪರಿಷತ್ ಸದಸ್ಯರಾದ ಮಂಜುನಾಥ ಭಂಡಾರಿ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಫೋನ್ ಕರೆ ಮಾಡಿ ಆರೋಗ್ಯ ವಿಚಾರಿಸಿದರು.

ಭಂಡಾರಿ ಅವರಿಗೆ ಕರೆ ಮಾಡಿದ ಮುಖ್ಯಮಂತ್ರಿಗಳು, ಚಿಕಿತ್ಸೆಯ ನಂತರದ ಚೇತರಿಕೆ ಮತ್ತು ಪ್ರಸ್ತುತ ಆರೋಗ್ಯ ಸ್ಥಿತಿಯ ಬಗ್ಗೆ ಸಮಗ್ರ ಮಾಹಿತಿ ಪಡೆದರು.
ಈ ಸಂದರ್ಭದಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ ಅವರು, “ಹೃದಯ ಚಿಕಿತ್ಸೆಯ ನಂತರ ವಿಶ್ರಾಂತಿ ಅತಿ ಮುಖ್ಯ. ನೀವು ಶೀಘ್ರವಾಗಿ ಪೂರ್ಣ ಗುಣಮುಖರಾಗಿ ಮತ್ತೆ ಸಾರ್ವಜನಿಕ ಸೇವೆಯಲ್ಲಿ ಸಕ್ರಿಯರಾಗಿ ತೊಡಗಿಸಿಕೊಳ್ಳಿ” ಎಂದು ಶುಭ ಹಾರೈಸಿ ಧೈರ್ಯ ತುಂಬಿದರು.
ಮುಖ್ಯಮಂತ್ರಿಗಳ ಆಪ್ತ ಕರೆಗೆ ಮಂಜುನಾಥ ಭಂಡಾರಿ ಅವರು ಕೃತಜ್ಞತೆ ಸಲ್ಲಿಸಿದ್ದಾರೆ.