ಬೆಳ್ತಂಗಡಿ : ಬೈಕ್ ಡಿವೈಡರ್‌ಗೆ ಢಿಕ್ಕಿ ಹೊಡೆದು ಸವಾರ ಗಂಭೀರವಾಗಿ ಗಾಯಗೊಂಡ ಘಟನೆ ರಾಷ್ಟ್ರೀಯ ಹೆದ್ದಾರಿಯ ಲಾಯಿಲ ಪ್ರಸನ್ನ ಕಾಲೇಜು ಸಮೀಪ ಇಂದು(ಫೆ.21) ಬೆಳಿಗ್ಗೆ ನಡೆದಿದೆ.

ಬೆಳ್ತಂಗಡಿ ತಾಲೂಕಿನ ಬೆಳಾಲಿನ ಮಾಯಾ ನಿವಾಸಿ ಸಂಜೀವ(50) ಗಾಯಾಳು.

ಉಜಿರೆಯಿಂದ ಬೆಳ್ತಂಗಡಿ ಕಡೆ ಬರುತ್ತಿದ್ದ ವೇಳೆ ಬೈಕ್ ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್‌ಗೆ ಢಿಕ್ಕಿ ಹೊಡೆದಿದ್ದು, ಗಾಯಾಳುವನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಲಾಗಿದೆ.
ಮಾಹಿತಿ ತಿಳಿದು ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.