ಗೃಹಸಚಿವ ಡಾ.ಜಿ.ಪರಮೇಶ್ವರ್ ಅವರಿಂದ ಶಾಸಕ ಮಂಜುನಾಥ ಭಂಡಾರಿ ಅವರ ಆರೋಗ್ಯ ವಿಚಾರಣೆ

ಬೆಂಗಳೂರು: ರಾಜ್ಯದ ಗೃಹಸಚಿವ ಡಾ.ಜಿ.ಪರಮೇಶ್ವರ್ ಅವರು ಕೆಪಿಸಿಸಿ ಕಾರ್ಯಾಧ್ಯಕ್ಷರು ಹಾಗೂ ವಿಧಾನ ಪರಿಷತ್ ಸದಸ್ಯರಾದ ಮಂಜುನಾಥ ಭಂಡಾರಿ ಅವರ ಬೆಂಗಳೂರಿನ ಸದಾಶಿವನಗರದ ನಿವಾಸಕ್ಕೆ ಭೇಟಿ ನೀಡಿದರು.

ಕಳೆದ ಕೆಲವು ದಿನಗಳಿಂದ ವಿಶ್ರಾಂತಿಯಲ್ಲಿರುವ ಭಂಡಾರಿ ಅವರನ್ನು ಭೇಟಿ ಮಾಡಿದ ಸಚಿವರು, ಅವರ ಆರೋಗ್ಯ ಸ್ಥಿತಿಗತಿಯ ಬಗ್ಗೆ ಮಾಹಿತಿ ಪಡೆದುಕೊಂಡರಲ್ಲದೆ ಶೀಘ್ರವಾಗಿ ಚೇತರಿಸಿಕೊಳ್ಳಿ ಎಂದು ಹಾರೈಸಿದರು.

ಈ ಸಂದರ್ಭದಲ್ಲಿ ಉಭಯ ನಾಯಕರು ಕೆಲ ಕಾಲ ಸಮಾಲೋಚನೆ ನಡೆಸಿದರು. ಭಂಡಾರಿ ಅವರ ಚಿಕಿತ್ಸೆಯ ವಿವರಗಳನ್ನು ಕುಟುಂಬದವರಿಂದ ಕೇಳಿ ತಿಳಿದುಕೊಂಡ ಪರಮೇಶ್ವರ್ ಅವರು, ವಿಶ್ರಾಂತಿಯ ಅಗತ್ಯದ ಬಗ್ಗೆ ಆತ್ಮೀಯವಾಗಿ ಮಾತನಾಡಿದರು. ಮಂಜುನಾಥ ಭಂಡಾರಿ ಅವರು ಶೀಘ್ರದಲ್ಲೇ ಗುಣಮುಖರಾಗಿ ಮತ್ತೆ ಸಕ್ರಿಯ ರಾಜಕಾರಣಕ್ಕೆ ಮರಳುವಂತೆ ಶುಭಹಾರೈಸಿದರು.

error: Content is protected !!