ಯುವಕ-ಯುವತಿಯರಿಗೆ ಉಚಿತ ಕೌಶಲ್ಯ ತರಬೇತಿ: ಅರ್ಜಿ ಆಹ್ವಾನ

ಮಂಗಳೂರು: ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯಡಿ ಕಾರ್ಯನಿರ್ವಹಿಸುವ ಕರ್ನಾಟಕ ಕೌಶಲ್ಯಾಭಿವೃದ್ಧಿ ನಿಗಮದ ವತಿಯಿಂದ ಜಿಲ್ಲೆಯ ಆಸಕ್ತ ಅಭ್ಯರ್ಥಿಗಳಿಗೆ ಹಾಗೂ ‘ಯುವನಿಧಿ’ ಯೋಜನೆಯ ಫಲಾನುಭವಿಗಳಿಗೆ ವಿವಿಧ ವೃತ್ತಿಪರ ಕೋರ್ಸ್‌ಗಳಲ್ಲಿ ಉಚಿತ ಕೌಶಲ್ಯ ತರಬೇತಿಯನ್ನು ನೀಡಲಾಗುತ್ತದೆ.

ಜಿಲ್ಲೆಯ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಗಳಾದ (ಐಟಿಐ) ಕದ್ರಿ ಮಂಗಳೂರು, ಬೆಳ್ತಂಗಡಿ, ಪುತ್ತೂರು ಹಾಗೂ ವಿಟ್ಲ ಕೇಂದ್ರಗಳಲ್ಲಿ ತರಬೇತಿ ಲಭ್ಯವಿದೆ. ಇದರೊಂದಿಗೆ ಕದ್ರಿಯ ಕರ್ನಾಟಕ ಜರ್ಮನ್ ತಾಂತ್ರಿಕ ತರಬೇತಿ ಸಂಸ್ಥೆ (ಕೆ.ಜಿ.ಟಿ.ಟಿ.ಐ), ಬೈಕಂಪಾಡಿಯ ಸರ್ಕಾರಿ ಉಪಕರಣಗಾರ ಮತ್ತು ತರಬೇತಿ ಸಂಸ್ಥೆ (ಜಿ.ಟಿ.ಟಿ.ಸಿ), ಉರ್ವ ಮಾರುಕಟ್ಟೆಯಲ್ಲಿರುವ ಉದ್ಯಮಶೀಲತಾಭಿವೃದ್ಧಿ ಕೇಂದ್ರ (ಸಿಡಾಕ್) ಹಾಗೂ ಪಿ.ವಿ.ಎಸ್ ಕಟ್ಟಡದಲ್ಲಿರುವ ಎಸ್.ಎನ್.ಎಸ್ ಎಂಟರ್‌ಪ್ರೈಸಸ್ ಕೇಂದ್ರಗಳಲ್ಲಿಯೂ ಅಭ್ಯರ್ಥಿಗಳು ಉಚಿತ ತರಬೇತಿ ಪಡೆಯಬಹುದು.

ಆಸಕ್ತ ಅಭ್ಯರ್ಥಿಗಳು ಈ ಸೌಲಭ್ಯದ ಸದುಪಯೋಗ ಪಡೆದುಕೊಳ್ಳುವಂತೆ ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿಗಳು ಪ್ರಕಟಣೆಯಲ್ಲಿ ಕೋರಿದ್ದಾರೆ. ಹೆಚ್ಚಿನ ಮಾಹಿತಿಗಾಗಿ ಕಚೇರಿ ದೂರವಾಣಿ ಸಂಖ್ಯೆ: 0824-2453222 ಅಥವಾ ಆಯಾ ಸಂಸ್ಥೆಗಳ ಮುಖ್ಯಸ್ಥರನ್ನು ಸಂಪರ್ಕಿಸಬಹುದಾಗಿದೆ.

error: Content is protected !!