ಮಹಿಳಾ ಉದ್ಯಮಿಗಳ ಮಾಹಿತಿ ನೋಂದಣಿಗೆ ಗೃಹಲಕ್ಷ್ಮೀ ಡಿಜಿಟಲ್‌ ಮಾರ್ಕೆಟಿಂಗ್‌ ಆ್ಯಪ್

ಮಂಗಳೂರು: ಸರಕಾರದ ಗೃಹಲಕ್ಷ್ಮೀ  ಡಿಜಿಟಲ್‌ ಮಾರ್ಕೆಟಿಂಗ್‌ ಆ್ಯಪ್‌ನಲ್ಲಿ ಸ್ತ್ರೀಶಕ್ತಿ ಸ್ವ-ಸಹಾಯ ಗುಂಪಿನ ಸದಸ್ಯರು, ಎನ್‌.ಆರ್‌.ಎಲ್‌.ಎಂ. ಫಲಾನುಭವಿಗಳು/ಎನ್‌.ಆರ್‌.ಎಲ್‌.ಎಂ. ಉದ್ಯಮಿಗಳು, ಅಕ್ಕ ಕೆಫೆ ಘಟಕಗಳನ್ನು ನಿರ್ವಹಿಸುತ್ತಿರುವ ಮಹಿಳೆಯರು, ಕರ್ನಾಟಕ ಸ್ಮಾಲ್‌ ಸ್ಕೇಲ್‌ ಇಂಡಸ್ಟ್ರೀಸ್‌ ಅಸೋಸಿಯೇಶನ್‌ ಘಟಕಗಳ ಮಹಿಳಾ ಉದ್ಯಮಿಗಳು, ರುಡ್‌ಸೆಟ್‌(ಧರ್ಮಸ್ಥಳ) ಮೂಲಕ ತರಬೇತಿ ಪಡೆದು ಸ್ವ-ಉದ್ಯೋಗ ನಡೆಸುತ್ತಿರುವ ಮಹಿಳೆಯರು, ನಿಗಮದಿಂದ ವಿವಿಧ ಯೋಜನೆಗಳ ಅಡಿಯಲ್ಲಿ ಸೌಲಭ್ಯ ಪಡೆದ ಮಹಿಳಾ ಫಲಾನುಭವಿಗಳು, ಜಿಲ್ಲಾ/ತಾಲೂಕು ಮತ್ತು ಗ್ರಾಮ ಪಂಚಾಯತ್‌ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಇತರ ಯಶಸ್ವಿ ಮಹಿಳಾ ಉದ್ಯಮಿಗಳು ತಯಾರಿಸುವ ಉತ್ಪನ್ನಗಳ ಮಾಹಿತಿಯನ್ನು ನೊಂದಾಯಿಸಲು gruhalakshmidigital.org ವೆಬ್‌ಸೈಟ್‌ ಮೂಲಕ ಸರಿಯಾದ ಸಂಪೂರ್ಣ ಮಾಹಿತಿಯೊಂದಿಗೆ ಅರ್ಹ ಮಹಿಳಾ ಉದ್ಯಮಿಗಳು ನೊಂದಾಯಿಸಬಹುದು.

ಹೆಚ್ಚಿನ ವಿವರಗಳಿಗಾಗಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರ ಕಚೇರಿಯ ಮಹಿಳಾ ಅಭಿವೃದ್ಧಿ ನಿರೀಕ್ಷಕರನ್ನು ಸಂಪರ್ಕಿಸಬಹುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

error: Content is protected !!