ಶಿವಮೊಗ್ಗ: ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಯೋರ್ವನನ್ನು ಕೊಲೆಗೈದಿರುವ ಘಟನೆ ಶಿವಮೊಗ್ಗದ ತುಂಗಾನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸೋಮವಾರ(ಫೆ.23) ರಾತ್ರಿ ನಡೆದಿದೆ.

ಸರ್ಕಾರಿ ಫ್ರೌಢಶಾಲೆಯಲ್ಲಿ ಎಸ್ಸೆಸ್ಸೆಲ್ಸಿ ಓದುತ್ತಿದ್ದ ಯುವಕ, ಪರೀಕ್ಷೆ ಹಿನ್ನೆಲೆಯಲ್ಲಿ ಸ್ಪೆಷಲ್ ಕ್ಲಾಸ್ ಮುಗಿಸಿ ಮನೆಗೆ ಹಿಂದಿರುಗಿದ ವೇಳೆ 3 ರಿಂದ 4 ಬಾಲಕರು ಶಾಲೆಯಿಂದ ಸ್ವಲ್ಪ ದೂರದಲ್ಲಿ ಹಲ್ಲೆ ಮಾಡಿದ್ದಾರೆ ಎನ್ನಲಾಗಿದೆ.

ಹಲ್ಲೆಯಿಂದ ತೀವ್ರ ಅಸ್ತಸ್ವಗೊಂಡ ಬಾಲಕನನ್ನು ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ಸಾವನ್ನಪ್ಪಿದ್ದಾನೆ ಎಂದು ತಿಳಿದು ಬಂದಿದೆ. ಶಾಲೆಯನ್ನು ಮಧ್ಯದಲ್ಲೇ ತೊರೆದಿದ್ದ ಬಾಲಕರಿಂದಲೇ ಕೃತ್ಯ ನಡೆದಿದೆ ಎಂದು ಶಂಕಿಸಲಾಗಿದೆ.