‌ಚಾಲಕನ ನಿಯಂತ್ರಣ ತಪ್ಪಿ ಎನ್ಎಸ್ಎಸ್ ಕ್ಯಾಂಪ್ ಗೆ ತೆರಳುತ್ತಿದ್ದ ಬಸ್‌ ಪಲ್ಟಿ!!

ಕುಂದಾಪುರ: ಕಾಲೇಜು ವಿದ್ಯಾರ್ಥಿಗಳಿದ್ದ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ಅಪಘಾತಕ್ಕೀಡಾಗಿದ್ದು, ವಿದ್ಯಾರ್ಥಿಗಳು ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿರುವ ಘಟನೆ ಹಳ್ಳಿಹೊಳೆ ಸಮೀಪದ ಶೆಟ್ಟಿಪಾಲು ಎಂಬಲ್ಲಿ ಸೋಮವಾರ(ಫೆ.23) ನಡೆದಿದೆ.

ಹಳ್ಳಿಹೊಳೆ ಗ್ರಾಮದ ಸುಳಗೊಡು ಶಾಲೆಯಲ್ಲಿ ನಡೆಯುತ್ತಿದ್ದ ಎನ್‌.ಎಸ್‌.ಎಸ್‌ ಶಿಬಿರಕ್ಕೆ ಖಾಸಗಿ ಕಾಲೇಜಿನ ವಿದ್ಯಾರ್ಥಿಗಳನ್ನು ಕರೆದೊಯ್ಯುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿದ ಬಸ್ ಉರುಳಿ ಬಿದ್ದಿದೆ. ಈ ವೇಳೆ ಬಸ್ ತೆಂಗಿನ ಮರಕ್ಕೆ ಢಿಕ್ಕಿಯಾಗಿ ನಿಂತಿದ್ದರಿಂದ ಭಾರೀ ಅನಾಹು ತಪ್ಪಿದೆ. ವಿದ್ಯಾರ್ಥಿಗಳು ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ.

ಬಸ್ಸಿನ ಮುಂಭಾಗಕ್ಕೆ ಹಾನಿಯಾಗಿದೆ. ಈ ಬಗ್ಗೆ ಯಾವುದೇ ದೂರು ದಾಖಲಾಗಿಲ್ಲ ಎಂದು ತಿಳಿದುಬಂದಿದೆ.

error: Content is protected !!