ನವದೆಹಲಿ: ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ(ಎಸ್‌ಬಿಐ) ಬ್ಯಾಂಕ್ ಸರ್ಕಲ್ ಬೇಸ್ಡ್ ಆಫೀಸರ್ (ಸಿಬಿಒ) ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಿದೆ. ಕಳೆದ ಸಾಲಿನ ಉಳಿಕೆ ಹುದ್ದೆಗಳನ್ನು ಸೇರಿಸಿ ಒಟ್ಟು 2,273 ಖಾಲಿ ಸ್ಥಾನಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಈ ಪೈಕಿ ಕರ್ನಾಟಕ ರಾಜ್ಯದಲ್ಲಿ 211 ಹುದ್ದೆಗಳು ಲಭ್ಯವಿದೆ.

ವಿದ್ಯಾರ್ಹತೆ: ಅಧಿಕೃತ ವಿಶ್ವವಿದ್ಯಾನಿಲಯ ಇಲ್ಲವೇ ಮಾನ್ಯತೆ ಪಡೆದ ಶಿಕ್ಷಣ ಸಂಸ್ಥೆಯಿಂದ ಯಾವುದೇ ವಿಷಯದಲ್ಲಿ ಪದವಿ, ವೈದ್ಯಕೀಯ,ಎಂಜಿನಿಯರಿಂಗ್‌ಚಾರ್ಟರ್ಡ್ ಅಕೌಂಟೆಂಟ್ ಮತ್ತು ಕಾಸ್ಟ್ ಅಕೌಂಟೆಂಟ್ ಶಿಕ್ಷಣ ಪಡೆದವರು ಅರ್ಜಿ ಸಲ್ಲಿಸಬಹುದಾಗಿದೆ. ವಾಣಿಜ್ಯ ಬ್ಯಾಂಕ್ ಇಲ್ಲವೇ ಪ್ರಾದೇಶಿಕ ಗ್ರಾಮೀಣ ಬ್ಯಾಂಕ್‌ನಲ್ಲಿ ಅಧಿಕಾರಿಯಾಗಿ ಕನಿಷ್ಠ 2 ವರ್ಷ ಅನುಭವ ಕಡ್ಡಾಯ. ಇನ್ನು ಆಯಾಯ ವೃತ್ತಕ್ಕೆ ಅರ್ಜಿ ಸಲ್ಲಿಸಬಯಸುವವರಿಗೆ ಸ್ಥಳೀಯ ಭಾಷೆಯ ಜ್ಞಾನ ಅತ್ಯಗತ್ಯ.

ವಯೋಮಿತಿ: ಅರ್ಜಿ ಸಲ್ಲಿಸುವವರಿಗೆ ಕನಿಷ್ಠ 21 ವರ್ಷ ಮತ್ತು ಗರಿಷ್ಠ 30 ವರ್ಷ ವಯಸ್ಸಾಗಿರಬೇಕು. ಮೀಸಲಾತಿ ನಿಯಮಗಳ ಪ್ರಕಾರ ಎಸ್‌ಸಿ/ಎಸ್ ಟಿ ಅಭ್ಯರ್ಥಿಗಳಿಗೆ 5 ವರ್ಷ, ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ, ಪಿಡಬ್ಲ್ಯುಬಿಡಿ ಅಭ್ಯರ್ಥಿಗಳಿಗೆ 10-15 ವರ್ಷ ಹಾಗೂ ಮಾಜಿ ಸೈನಿಕರಿಗೆ 5 ವರ್ಷಗಳ ವಯೋಮಿತಿ ಸಡಿಲಿಕೆ ಇದೆ.

ಅರ್ಜಿ ಶುಲ್ಕ: ಸಾಮಾನ್ಯ/ಇಡಬ್ಲ್ಯುಎಸ್/ಒಬಿಸಿ ವರ್ಗಗಳ ಅಭ್ಯರ್ಥಿಗಳಿಗೆ 750 ರೂ. ಎಸ್‌ಸಿ/ಎಸ್‌ಟಿ/ಪಿಡಬ್ಲ್ಯುಬಿಡಿ ವರ್ಗದ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕದಿಂದ ವಿನಾಯಿತಿ ನೀಡಲಾಗಿದೆ.
ಆಯ್ಕೆ ಪ್ರಕ್ರಿಯೆ: ಅಭ್ಯರ್ಥಿಗಳ ಆಯ್ಕೆಯು ಆನ್ಲೈನ್ ಲಿಖಿತ ಪರೀಕ್ಷೆ, ದಾಖಲೆಗಳ ಪರಿಶೀಲನೆ ಮತ್ತು ಸಂದರ್ಶನದ ಮೂಲಕ ನಡೆಯಲಿದೆ.
ಸಕ್ತ ಅಭ್ಯರ್ಥಿಗಳು https://sbi.bank.in/web/careers/currentopenings ಅಥವಾ https://ibpsreg.ibps.in/sbicbonov25/ ಮೂಲಕ ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಫೆಬ್ರವರಿ 25, 2026 ಕೊನೆಯ ದಿನಾಂಕವಾಗಿದೆ. ಹೆಚ್ಚಿನ ಮಾಹಿತಿಗಾಗಿ https://sbi.co.in ವೆಬ್ಸೈಟ್ ವೀಕ್ಷಿಸಬಹುದು.